ಸಮಾಜದ ಸ್ವಾಸ್ಥ್ಯ ಕಾಪಾಡಲು ಪೊಲೀಸ್ ಇಲಾಖೆ ನಿರಂತರ ಸೇವೆ : ನ್ಯಾ. ಪಲ್ಲವಿ ಬಿ. ಆರ್
ಹುಬ್ಬಳ್ಳಿ, 21 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ದೇಶದೊಳಗಿನ ಸಮಾಜದ ಸ್ವಾಸ್ಥ್ಯ ಕಾಪಾಡಲು ಪೊಲೀಸ್ ಇಲಾಖೆ ನಿರಂತರವಾಗಿ ಸೇವೆ ಸಲ್ಲಿಸುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರಷ್ಟೇ ಅಲ್ಲ, ಸಾರ್ವಜನಿಕರು ಕಾನೂನು ಪಾಲನೆ ಮಾಡುವ ಮೂಲಕ ಸಹಕಾರ ನೀಡಬೇಕಾಗುತ್ತದೆ ಎಂದು ಒಂದನೇಯ ಹೆಚ್ಚುವರಿ ಜಿಲ್
Martyrs' Day


ಹುಬ್ಬಳ್ಳಿ, 21 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ದೇಶದೊಳಗಿನ ಸಮಾಜದ ಸ್ವಾಸ್ಥ್ಯ ಕಾಪಾಡಲು ಪೊಲೀಸ್ ಇಲಾಖೆ ನಿರಂತರವಾಗಿ ಸೇವೆ ಸಲ್ಲಿಸುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರಷ್ಟೇ ಅಲ್ಲ, ಸಾರ್ವಜನಿಕರು ಕಾನೂನು ಪಾಲನೆ ಮಾಡುವ ಮೂಲಕ ಸಹಕಾರ ನೀಡಬೇಕಾಗುತ್ತದೆ ಎಂದು ಒಂದನೇಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪಲ್ಲವಿ ಬಿ. ಆರ್. ಹೇಳಿದರು.

ಹುಬ್ಬಳ್ಳಿ ಧಾರವಾಡ ಆಯುಕ್ತಾಲಯದ ಹಳೆಯ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಆಯುಕ್ತಾಲಯ ಹುಬ್ಬಳ್ಳಿ ಧಾರವಾಡ ನಗರ ವತಿಯಿಂದ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಪುಷ್ಪಾಗುಚ್ಛ ಸಮರ್ಪಿಸಿ, ಬಳಿಕ ಅವರು ಮಾತನಾಡಿದರು.

ದೇಶದ ಗಡಿಪ್ರದೇಶದಲ್ಲಿ ಶತ್ರುಗಳನ್ನು ತಡೆಯಲು ನಮ್ಮ ದೇಶದ ಸೈನಿಕರು ನಿರತರಾಗಿದ್ದಾರೆ. ಸಮಾಜದಲ್ಲಿ ಶಾಂತಿ ನೆಲೆಸಲು ಪೊಲೀಸ್ ಇಲಾಖೆ ಕಾರಣವಾಗಿದ್ದು, ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸಬೇಕಾಗುತ್ತದೆ. ನಾವು ಹಬ್ಬದಲ್ಲಿ ಸಂಭ್ರಮಿಸುವಾಗ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯಬಾರದು ಎಂದು ಹಬ್ಬದ ಸಂಭ್ರಮ ಮರೆತು ನಿರಂತರವಾಗಿ ಪೊಲೀಸ್ ಇಲಾಖೆ ಸಿಬ್ಬಂದಿ ಸೇವೆಯಲ್ಲಿ ನಿರತರಾಗಿರುತ್ತಾರೆ. ಪೊಲೀಸ್ ಇಲಾಖೆಗೆ ನಾವೆಲ್ಲರೂ ಚಿರ ಋಣಿಯಾಗಿರಬೇಕು. ಅವರ ನಿರಂತರ ಸೇವೆಗೆ ನಾವು ಅಭಾರಿಗಳಾಗಿರಬೇಕು ಎಂದು ಅವರು ತಿಳಿಸಿದರು.

ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ಮಾತನಾಡಿ, 21-10-1959 ರಂದು ಜಮ್ಮು ಕಾಶ್ಮೀರದಲ್ಲಿ ಸಿಆರ್‌‌ಪಿಎಫ್ ತಂಡದ ಮೇಲೆ ಚೀನಾ ದಾಳಿ ಮಾಡಿತು. ಆ ಸಂದರ್ಭದಲ್ಲಿ 10 ಜನ ಸಿಆರ್‌‌ಪಿಎಫ್ ಪೊಲೀಸರು ಮರಣ ಹೊಂದಿದರು. 9 ಜನ ಪೊಲೀಸರನ್ನು ಚೀನಾ ವಶಕ್ಕೆ ಪಡೆದುಕೊಂಡಿತು. ಈ ಕಾರ್ಯಾಚರಣೆಯಲ್ಲಿ ವೀರ ಮರಣ ಹೊಂದಿದ ಹುತಾತ್ಮರನ್ನು ಸ್ಮರಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಅಕ್ಟೋಬರ್ 21 ರಂದು ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುತ್ತದೆ. ದೇಶದಲ್ಲಿ 1-9-2024 ರಿಂದ 31-8-2025 ರವರೆಗೆ 191 ಪೊಲೀಸ್ ಅಧಿಕಾರಿ, ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮೃತಪಟ್ಟಿದ್ದಾರೆ. ಸಾರ್ವಜನಿಕರು ಪೊಲೀಸ್ ಇಲಾಖೆಗೆ ಸಹಕಾರ ನೀಡಿದ್ದಲ್ಲಿ ಉತ್ತಮ ಜನಸ್ನೇಹಿ ಪೊಲೀಸ್ ವ್ಯವಸ್ಥೆ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು. ಪೊಲೀಸರ ತ್ಯಾಗ, ಬಲಿದಾನಕ್ಕೆ ಫಲ ಸಿಗಲಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande