ಬೆಂಗಳೂರಿನಲ್ಲಿ ಪ.ಬಂಗಾಳ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ಬೆಂಗಳೂರು, 22 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆಯೊಬ್ಬರ ಮೇಲೆ ಕಳೆದ ರಾತ್ರಿ ಸಾಮೂಹಿಕ ಅತ್ಯಾಚಾರ ನಡೆದಿರುವ ಕುರಿತು ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹಿಳೆ ಮನೆಗೆ ರಾತ್ರಿ
Rape


ಬೆಂಗಳೂರು, 22 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆಯೊಬ್ಬರ ಮೇಲೆ ಕಳೆದ ರಾತ್ರಿ ಸಾಮೂಹಿಕ ಅತ್ಯಾಚಾರ ನಡೆದಿರುವ ಕುರಿತು ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹಿಳೆ ಮನೆಗೆ ರಾತ್ರಿ ವೇಳೆ ಮೂವರು ವ್ಯಕ್ತಿಗಳು ನುಗ್ಗಿ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಲಾಗಿದೆ. ಈ ಕುರಿತು ಮಹಿಳೆ ನೀಡಿದ ದೂರಿನ ಮೇರೆಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮುಂದುವರೆಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande