
ಧಾರವಾಡ, 22 ಅಕ್ಟೋಬರ್ (ಹಿ.ಸ.):
ಆ್ಯಂಕರ್:
ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಡಿಸೆಂಬರ್ 21 ರಿಂದ 23ರವರೆಗೆ ನಡೆಯುವ ತೋಟಗಾರಿಕಾ ಮೇಳ–2025 ಸಂದರ್ಭದಲ್ಲಿ ಶ್ರೇಷ್ಠ ತೋಟಗಾರಿಕೆ ರೈತ ಮತ್ತು ರೈತ ಮಹಿಳೆ ಪ್ರಶಸ್ತಿಗಳನ್ನು ಪ್ರದಾನ ಮಾಡಲು ಅರ್ಜಿ ಆಹ್ವಾನಿಸಿದೆ.
ವಿಶ್ವವಿದ್ಯಾಲಯ ವ್ಯಾಪ್ತಿಯ 24 ಜಿಲ್ಲೆಗಳಲ್ಲಿನ ಪ್ರತಿಯೊಂದು ಜಿಲ್ಲೆಯಿಂದ ಒಬ್ಬ ರೈತ ಹಾಗೂ ರೈತ ಮಹಿಳೆಯನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ನಮೂನೆಗಳನ್ನು ಧಾರವಾಡ ಪ್ರಾದೇಶಿಕ ತೋಟಗಾರಿಕಾ ಸಂಶೋಧನಾ ಕೇಂದ್ರದಲ್ಲಿ ಅಥವಾ www.uhsbagalkot.kar-nataka.gov.in ಮೂಲಕ ಪಡೆಯಬಹುದು.
ಅರ್ಜಿಗಳನ್ನು ಅ.31, 2025ರೊಳಗಾಗಿ ಸಲ್ಲಿಸಬೇಕು. ವಿವರಗಳಿಗೆ ದೂರವಾಣಿ 7892770955, 9880036097 ಅಥವಾ 1800 425 7910 ಗೆ ಸಂಪರ್ಕಿಸಬಹುದು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa