ಹಾವೇರಿ, 22 ಅಕ್ಟೋಬರ್ (ಹಿ.ಸ.):
ಆ್ಯಂಕರ್:
ಹೋರಿ ತಿವಿದು ಓರ್ವ ವಯೋವೃದ್ಧ ವ್ಯಕ್ತಿ ಸಾವನ್ನಪ್ಪಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಮೃತರನ್ನು 70 ವರ್ಷದ ಚಂದ್ರಶೇಖರ್ ಕೊಡಿಹಳ್ಳಿ ಎಂದು ಗುರುತಿಸಲಾಗಿದೆ.
ಚಂದ್ರಶೇಖರ ಕೋಡಹಳ್ಳಿ ಅವರು ಹಾವೇರಿಯ ದಾನೇಶ್ವರಿನಗರದ ನಿವಾಸಿ. ಘಟನೆಯಲ್ಲಿ ಇನ್ನಿಬ್ಬರಿಗೆ ಗಂಭೀರ ಗಾಯವಾಗಿದ್ದು, ಹುಬ್ಬಳ್ಳಿಯ ಕಿಮ್ಸ್ಗೆ ರವಾನಿಸಲಾಗಿದೆ. ಹೋರಿ ಬೆದರಿಸುವ ಸ್ಪರ್ಧೆಯನ್ನು ನೋಡಿ ವಾಪಸ್ ಮನೆಗೆ ಹೋಗುತ್ತಿದ್ದ ವೇಳೆ, ಹಿಂದಿನಿಂದ ಹೋರಿ ತಿವಿದು ಈ ಘಟನೆ ನಡೆದಿದೆ. ಹಾವೇರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa