ಮಂಡ್ಯ, 22 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಮಂಡ್ಯ ತಾಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ಪತಿ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಮೃತರನ್ನು ಶ್ವೇತಾ (36) ಎಂದು ಗುರುತಿಸಲಾಗಿದೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ದಂಪತಿ ನಡುವೆ ಏನೋ ಕಾರಣದಿಂದ ತೀವ್ರ ವಾಗ್ವಾದ ಉಂಟಾಗಿ, ಕೋಪಗೊಂಡ ಪತಿ ಲೋಕೇಶ್ ಮಚ್ಚಿನಿಂದ ಶ್ವೇತಾಳ ಮೇಲೆ ಹಲ್ಲೆ ನಡೆಸಿ ಸ್ಥಳದಲ್ಲೇ ಕೊಲೆ ಮಾಡಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಘಟನಾ ಸ್ಥಳಕ್ಕೆ ಮಂಡ್ಯ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ಲೋಕೇಶ್ ಅವರನ್ನು ಬಂಧಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa