ಬಳ್ಳಾರಿ, 23 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆದರ್ಶ ಉದ್ಯಾನವನ ಅಭಿವೃದ್ಧಿ ಸಂಘ ಇವರ ಸಹಯೋಗದಲ್ಲಿ ಅ.25 ರಂದು ಸಂಜೆ 05 ಗಂಟೆಗೆ ನಗರದ ಜಿಎಸ್‌ಟಿ ಆಫೀಸ್ ಹತ್ತಿರದ ವಾರ್ಡ್ ನಂ.20 ರ ರಾಘವೇಂದ್ರ ಕಾಲೋನಿಯ 2ನೇ ಹಂತದಲ್ಲಿ ‘ಮಾದರಿ ಉದ್ಯಾನವನ’ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರೂ ಆದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಬೆಂಗಳೂರಿನ ಬಹು ಮಹಡಿಗಳ ಕಟ್ಟಡದ ನಗರಾಭಿವೃದ್ಧಿ ಪ್ರಾಧಿಕಾರಗಳು ಹಾಗೂ ನಗರ ಮತ್ತು ಗ್ರಾಮಾಂತರ ಆಯುಕ್ತಾಲಯದ ಆಯುಕ್ತ ವೆಂಕಟಚಲಪತಿ ಆರ್., ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ ಪಿ.ಎಸ್., ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಿ.ಖಲೀಲ್ ಸಾಬ್ ಸೇರಿದಂತೆ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರು, ಅಧಿಕಾರಿ-ಸಿಬ್ಬಂದಿ ವರ್ಗ ಮತ್ತು ಸಾರ್ವಜನಿಕರು ಉಪಸ್ಥಿತರಿರುವರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್