ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ
ವಿಜಯಪುರ, 23 ಅಕ್ಟೋಬರ್(ಹಿ.ಸ.) : ಆ್ಯಂಕರ್ : ರಾಜ್ಯೋತ್ಸವ ಅಂಗವಾಗಿ ವಿಜಯಪುರ ನಗರದ ಪ್ರಮುಖ ಬೀದಿಗಳಲ್ಲಿರುವ ಎಲ್ಲ ಅಂಗಡಿಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿ ಶೇ.60 ರಷ್ಟು ನಾಮಫಲಕಗಳ ಅಳವಡಿಸುವ ಕುರಿತು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಅ.27ರಂದು ಬೆಳಿಗ್ಗೆ 10 ಗಂಟೆಗೆ ನಗರದ ಬಿಎಲ್‍ಡಿಇ ಆಸ್ಪತ್ರ
ಫಲಕ


ವಿಜಯಪುರ, 23 ಅಕ್ಟೋಬರ್(ಹಿ.ಸ.) :

ಆ್ಯಂಕರ್ : ರಾಜ್ಯೋತ್ಸವ ಅಂಗವಾಗಿ ವಿಜಯಪುರ ನಗರದ ಪ್ರಮುಖ ಬೀದಿಗಳಲ್ಲಿರುವ ಎಲ್ಲ ಅಂಗಡಿಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿ ಶೇ.60 ರಷ್ಟು ನಾಮಫಲಕಗಳ ಅಳವಡಿಸುವ ಕುರಿತು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಅ.27ರಂದು ಬೆಳಿಗ್ಗೆ 10 ಗಂಟೆಗೆ ನಗರದ ಬಿಎಲ್‍ಡಿಇ ಆಸ್ಪತ್ರೆಯಿಂದ ಗಾಂಧಿ ವೃತ್ತದವರೆಗೆ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಈ ಅಭಿಯಾನದಲ್ಲಿ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಐಡಿ ಕಾರ್ಡನೊಂದಿಗೆ ಭಾಗವಹಿಸಬೇಕು. ಈ ಕುರಿತು ಹಾಜರಾತಿ ಪುಸ್ತಕವನ್ನು ನಿರ್ವಹಣೆ ಮಾಡಲಾಗುತ್ತಿದ್ದು, ಅಭಿಯಾನಕ್ಕೆ ಗೈರಾದ ಅಧಿಕಾರಿಗಳ ಹೆಸರುಗಳನ್ನು ಮರುದಿನ ಎಲ್ಲ ಪತ್ರಿಕೆಗಳನ್ನು ಪ್ರಕಟಣೆಗೆ ಕ್ರಮ ವಹಿಸಲಾಗುವುದು ಎಂದು ಅವರು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಎಚ್ಚರಿಕೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande