
ಬೆಳಗಾವಿ, 23 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ೨೦೨೮ರ ಚುಣಾವಣೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ಹಕ್ಕು ಮಂಡಿಸುವುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತು ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು , ತಾವು 2028ಕ್ಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹಕ್ಕು ಮಂಡಿಸುವುದಾಗಿ ತಿಳಿಸಿದರು.
ಯತೀಂದ್ರ ಹೇಳಿಕೆ ಅವರ ವಯಕ್ತಿಕ ಅಭಿಪ್ರಾಯ ಪಕ್ಷದ ನಿರ್ಧಾರವೇ ಅಂತಿಮವಾಗುತ್ತದೆ ಎಂದರು.
ನಾಯಕ ಯಾರು ಎಂಬುದು ಪಕ್ಷದ ಶಾಸಕರು ನಿರ್ಧರಿಸಲಿದ್ದಾರೆ. ನಾಯಕತ್ವ ಇಲ್ಲದೆ ಸಂಘಟನೆಯನ್ನು ಮುಂದುವರಿಸಲು ಸಾಧ್ಯವಿಲ್ಲ. ಡಿಸೆಂಬರ್ ಕ್ರಾಂತಿಯ ಬಗ್ಗೆ ನಮಗೆ ಮಾಹಿತಿ ಇಲ್ಲ.” ಸಿದ್ದರಾಮಯ್ಯನವರ ನಂತರ ಪಕ್ಷವನ್ನು ಮುನ್ನಡೆಸುವ ವಿಚಾರಕ್ಕೆ ಎಲ್ಲವನ್ನೂ ಕಾದು ನೋಡಬೇಕಾಗಿದೆ ಎಂದು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa