ಹಾಸನ, 23 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಶಕ್ತಿದೇವತೆ, ಹಾಸನದ ಅಧಿದೇವತೆ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಇಂದು ಶಾಸ್ತ್ರೋಕ್ತವಾಗಿ ಮುಚ್ಚಲಿದೆ.
ನಿನ್ನೆ ಹಾಸನಾಂಬ ದೇವಿ ಸಾರ್ವಜನಿಕ ದರ್ಶನ ಅಂತ್ಯಗೊಂಡಿದ್ದು, ಪೂಜೆಗಾಗಿ ಗರ್ಭಗುಡಿ ಬಾಗಿಲು ಮುಚ್ಚಲಾಗಿದೆ. ಮಧ್ಯಾಹ್ನ 12 ಗಂಟೆಗೆ ವಿಶ್ವರೂಪ ದರ್ಶನದ ಬಳಿಕ ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ಇಂದು ಬೆಳಗ್ಗೆವರೆಗೂ ಹಾಸನಾಂಬ ದೇವಿ ದರ್ಶನಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿತ್ತು. ಕಡೆಗಳಿಗೆಯಲ್ಲೂ ಭಕ್ತರು ಹಾಸನಾಂಬ ದೇವಿ ದರ್ಶನ ಪಡೆದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa