
ಬೆಂಗಳೂರು, 24 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ತುಮಕೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಲಾರಿ ಹಾಗೂ ಕಾರಿನ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗದಗ ಜಿಲ್ಲೆಯ ರೋಣದಿಂದ ಬೆಂಗಳೂರಿನ ನಾರಾಯಣ ಆಸ್ಪತ್ರೆಗೆ ತೆರಳುತ್ತಿದ್ದ ಕುಟುಂಬದವರು ಪ್ರಯಾಣಿಸುತ್ತಿದ್ದ ಮಾರುತಿ ಕಾರು ಟಿ.ಬೇಗೂರು ಬಳಿ ಮುಂದೆ ಹೋಗುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ತುರ್ತು ಬ್ರೇಕ್ ಹಾಕಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ವರದಿ ತಿಳಿಸಿದೆ.
ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಶಿವಲಿಂಗ ಗೌಡ (60) ಮತ್ತು ಪ್ರಮೀಳಾ (55) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಮೂವರು ಕುಟುಂಬ ಸದಸ್ಯರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದಿಂದ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa