
ನವದೆಹಲಿ, 24 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ದೆಹಲಿ ಪೊಲೀಸ್ ವಿಶೇಷ ದಳವು ಐಸಿಸ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಬಂಧಿಸಿದೆ. ಓರ್ವನನ್ನು ದೆಹಲಿಯ ಸಾದಿಕ್ ನಗರದಿನಿಂದ ಮತ್ತು ಮತ್ತೊಬ್ಬನನ್ನು ಮಧ್ಯಪ್ರದೇಶದ ಭೋಪಾಲ್‌ನಿಂದ ಬಂಧಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಇಬ್ಬರೂ ಆರೋಪಿಗಳು ಆತ್ಮಹತ್ಯಾ ದಾಳಿ ಮಾಡಲು ತರಬೇತಿ ಪಡೆಯುತ್ತಿದ್ದರು ಮತ್ತು ದೆಹಲಿಯಲ್ಲಿ ದೊಡ್ಡ ಮಟ್ಟದ ಭಯೋತ್ಪಾದಕ ದಾಳಿಗೆ ಸಂಚು ರೂಪಿಸುತ್ತಿದ್ದರು. ಬಂಧಿತ ಇಬ್ಬರೂ ಅದ್ನಾನ್ ಎಂಬ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ವಿಶೇಷ ದಳದ ಅಧಿಕಾರಿಯೊಬ್ಬರು ನೀಡಿರುವ ಮಾಹಿತಿ ಪ್ರಕಾರ, ಆರೋಪಿಗಳಿಂದ ಎಲೆಕ್ಟ್ರಾನಿಕ್ ಸಾಧನಗಳು ಹಾಗೂ ಹಲವು ಅಪರಾಧ ಸಂಬಂಧಿತ ದಾಖಲೆಗಳು ವಶಪಡಿಸಿಕೊಳ್ಳಲಾಗಿದೆ. ಅವರ ಸಂಪರ್ಕ ಜಾಲ ಹಾಗೂ ಸಂಚಿನ ಹಿಂದಿರುವ ಅಂತಾರಾಷ್ಟ್ರೀಯ ಸಂಬಂಧಗಳ ಕುರಿತು ಪತ್ತೆಹಚ್ಚಲು ವಿಚಾರಣೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa