
ಕೊಪ್ಪಳ, 24 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಕೊಪ್ಪಳ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಇರಕಲ್ಲಗಡರವರ ಸಂಯುಕ್ತಾಶ್ರಯದಲ್ಲಿ ಇರಕಲ್‍ಕಡಾದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರಿಗೆ ಹಾಗೂ ಸಿಬ್ಬಂದಿಗಳಿಗೆ ತಂಬಾಕು ಮುಕ್ತ ಯುವ ಅಭಿಯಾನ 3.0 (ವಿಶೇಷ ಅಭಿಯಾನ 60 ದಿನಗಳು) ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಐಇಸಿ ಪ್ರಚಾರ ಹಾಗೂ ತಂಬಾಕು ಸೇವನೆಯ ದುಷ್ಪರಿಣಾಮಗಳು, ಕೋಟ್ಪಾ ಕಾಯ್ದೆ-2003ರ ಬಗ್ಗೆ ಹಾಗೂ ತಂಬಾಕು ಸೇವನೆಯನ್ನು ತ್ಯಜಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಾಗೃತಿಯನ್ನು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ತಂಡದ ಸಂಗಪ್ಪ ಮಮಟಗೇರಿ, ಜಿಲ್ಲಾ ಸಲಹೆಗಾರರಾದ ಸರಸ್ವತಿ, ಸಮಾಜ ಕಾರ್ಯಕರ್ತರಾದ ಡಾ.ಲಕ್ಷ್ಮಿ ಕೆ, ಶೈಲಜಾ ಎಲ್.ಎಚ್.ವಿ ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್