ಬಿಹಾರದ ಮೂರು ಜಿಲ್ಲೆಗಳಲ್ಲಿ ಅಮಿತ್ ಶಾ ಪ್ರಚಾರ ಸಭೆ
ನವದೆಹಲಿ, 25 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬಿಹಾರ ವಿಧಾನಸಭಾ ಚುನಾವಣಾ ಪ್ರಚಾರದ ಅಂಗವಾಗಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಇಂದು ರಾಜ್ಯದ ಮೂರು ಸ್ಥಳಗಳಲ್ಲಿ ಜನರನ್ನದ್ದೇಶಿಸಿ ಮಾತನಾಡಲಿದ್ದಾರೆ. ಬಿಜೆಪಿ ಪ್ರಕಟಿಸಿದ ವೇಳಾಪಟ್ಟಿಯ ಪ್ರಕಾರ, ಖಗಾರಿಯಾ, ಮುಂಗೇರ್ ಮತ್ತು ನಳಂದ ಜಿಲ್ಲ
Amit sha


ನವದೆಹಲಿ, 25 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬಿಹಾರ ವಿಧಾನಸಭಾ ಚುನಾವಣಾ ಪ್ರಚಾರದ ಅಂಗವಾಗಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಇಂದು ರಾಜ್ಯದ ಮೂರು ಸ್ಥಳಗಳಲ್ಲಿ ಜನರನ್ನದ್ದೇಶಿಸಿ ಮಾತನಾಡಲಿದ್ದಾರೆ.

ಬಿಜೆಪಿ ಪ್ರಕಟಿಸಿದ ವೇಳಾಪಟ್ಟಿಯ ಪ್ರಕಾರ, ಖಗಾರಿಯಾ, ಮುಂಗೇರ್ ಮತ್ತು ನಳಂದ ಜಿಲ್ಲೆಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳಿಗೆ ಬೆಂಬಲವಾಗಿ ಭಾರೀ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಅಮಿತ್ ಶಾ ಅವರು ಮಧ್ಯಾಹ್ನ 1:45ಕ್ಕೆ ಖಗಾರಿಯಾದ ಜನನಾಯಕ್ ಕರ್ಪುರಿ ಠಾಕೂರ್ ಮೈದಾನದಲ್ಲಿ ಮೊದಲ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಅವರು ಮಧ್ಯಾಹ್ನ 2:15ಕ್ಕೆ ಮುಂಗೇರ್‌ನ ನೌಗರ್ಹಿ ಹೈಸ್ಕೂಲ್ ಮೈದಾನದಲ್ಲಿ ಎರಡನೇ ಸಭೆಯಲ್ಲಿ ಮಾತನಾಡಲಿದ್ದಾರೆ. ದಿನದ ಅಂತಿಮ ಸಭೆ ನಳಂದದ ಶ್ರಮಿಕ್ ಕಲ್ಯಾಣ್ ಮೈದಾನದಲ್ಲಿ ಮಧ್ಯಾಹ್ನ 3:45ಕ್ಕೆ ನಡೆಯಲಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande