ಬಿ.ಎಲ್.ಡಿ.ಇ ಸಂಸ್ಥೆ ಕೊಡುಗೆ ಅಪಾರ
ವಿಜಯಪುರ, 25 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಉತ್ತರ ಕರ್ನಾಟಕದಲ್ಲಿ ಶಿಕ್ಷಣ, ಆರೋಗ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ಬಿ.ಎಲ್.ಡಿ.ಇ ಸಂಸ್ಥೆ ಅಪಾರ ಕೊಡುಗೆ ನೀಡುತ್ತಿದೆ ಎಂದು ಶೇಗುಣಸಿ ವಿರಕ್ತಮಠದ ಡಾ. ಮಹಾಂತಪ್ರಭು ಮಹಾಸ್ವಾಮಿಗಳು ಹೇಳಿದ್ದಾರೆ. ನಗರದಲ್ಲಿ ನಡೆದ ಬಿ.ಎಲ್.ಡಿ.ಇ ಸಂಸ್ಥೆಯ ಸಂಸ್
ಸಂಸ್ಥೆ


ವಿಜಯಪುರ, 25 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಉತ್ತರ ಕರ್ನಾಟಕದಲ್ಲಿ ಶಿಕ್ಷಣ, ಆರೋಗ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ಬಿ.ಎಲ್.ಡಿ.ಇ ಸಂಸ್ಥೆ ಅಪಾರ ಕೊಡುಗೆ ನೀಡುತ್ತಿದೆ ಎಂದು ಶೇಗುಣಸಿ ವಿರಕ್ತಮಠದ ಡಾ. ಮಹಾಂತಪ್ರಭು ಮಹಾಸ್ವಾಮಿಗಳು ಹೇಳಿದ್ದಾರೆ. ನಗರದಲ್ಲಿ ನಡೆದ ಬಿ.ಎಲ್.ಡಿ.ಇ ಸಂಸ್ಥೆಯ ಸಂಸ್ಥಾಪನ ದಿನ ಕಾರ್ಯಕ್ರಮದಲ್ಲಿ‌ ಅವರು ಮಾತನಾಡಿದರು.

ಜ್ಯೋತಿಬಾ ಫುಲೆ ಅವರಂತೆ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಅವರು ಬಿ.ಎಲ್.ಡಿ.ಇ‌ ಸಂಸ್ಥೆಯನ್ನು ಪ್ರಾರಂಭಿಸುವ ಮೂಲಕ ಈ ಭಾಗದಲ್ಲಿ ಶಿಕ್ಷಣಕ್ಕೆ ಆದ್ಯತೆ ನೀಡಿದರು. ನಂತರ ಬಂಥನಾಳ‌ ಶ್ರೀಗಳು ಪ್ರವಚನಗಳ ಮೂಲಕ ಸಂಸ್ಥೆ ಆರ್ಥಿಕವಾಗಿ ಬೆಳೆಯಲು ಕೊಡುಗೆ ನೀಡಿದರು. ಶ್ರೀಮತಿ ಬಂಗಾರಮ್ಮ‌ ಸಜ್ಜನ 54 ಎಕರೆ ಭೂಮಿ ನೀಡಿದರು. ಬಿ. ಎಂ. ಪಾಟೀಲರು ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜು ಪ್ರಾರಂಭಿಸಿ ವೃತ್ತಿಪರ ಕೋರ್ಸುಗಳಿಗೆ ಆದ್ಯತೆ ನೀಡಿದರು. ಅವರು ಹಾಕಿದ ಭದ್ರ ಬುನಾದಿಯ ಪರಿಣಾಮ ಈಗ ಸಂಸ್ಥೆಯ ಅಡಿಯಲ್ಲಿ 100ಕ್ಕಿಂತಲೂ ಹೆಚ್ಚು ವಿದ್ಯಾಲಯಗಳು ಕಾರ್ಯ ನಿರ್ವಹಿಸುತ್ತಿವೆ. ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ ಅವರು ಜಲಸಂಪನ್ಮೂಲ ಸಚಿವರಾಗಿ ಜಲ, ವೃಕ್ಷ, ಶಿಕ್ಷಣಕ್ಕೆ ಆದ್ಯತೆ ನೀಡಿ ನೀರಾವರಿ ಕ್ರಾಂತಿ ಮಾಡಿದ್ದಾರೆ. ಈಗ ಕೈಗಾರಿಕೆ ಸಚಿವರಾಗಿ ಕೈಗಾರಿಕೆ ಮತ್ತು ಉದ್ಯೋಗ ಕ್ರಾಂತಿ ಮಾಡುತ್ತಿದ್ದಾರೆ. ಈ ಮೂಲಕ ವಿಜಯಪುರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾಗಿದ್ದಾರೆ. ಇತಿಹಾಸ ತಿಳಿದವರು ಇತಿಹಾಸ ರಚಿಸಲು ಸಾಧ್ಯ ಎಂಬುದನ್ನು ಸಾಧಿಸಿದ್ದಾರೆ ಎಂದು ಹೇಳಿದರು.

ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಮಾತನಾಡಿ, ಶತಮಾನಕ್ಕಿಂತಲೂ ಹೆಚ್ಚು ಇತಿಹಾಸ ಹೊಂದಿರುವ ಸಂಸ್ಥೆ ನಮಗೆಲ್ಲರಿಗೂ ಬದುಕು ಕೊಟ್ಟಿದೆ. ಅದಕ್ಕೆ ಪ್ರತಿಯಾಗಿ ನಾವೂ ಕೊಡುಗೆ ನೀಡಬೇಕು ಎಂದು ಹೇಳಿದರು.

ಸಂಸ್ಥೆಯ ಜಮಖಂಡಿ ಆವರಣದ ಆಡಳಿತಾಧಿಕಾರಿ ಡಾ. ಎಸ್. ಎಚ್. ಲಗಳಿ ಮಾತನಾಡಿ, ಸಂಸ್ಥೆಯಲ್ಲಿ ಈಗ 35 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಐದು ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮುಂದಿನ ವರ್ಷ ಕೃಷಿ ಮಹಾವಿದ್ಯಾಲಯ ಪ್ರಾರಂಭವಾಗುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.

ಇದೇ ವೇಳೆ ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 23 ವಿದ್ಯಾರ್ಥಿಗಳು, 33 ಸಿಬ್ಬಂದಿ ಹಾಗೂ 4 ಕಾಲೇಜುಗಳ ಮುಖ್ಯಸ್ಥರನ್ನು ಸನ್ಮಾನಿಸಲಾಯಿತು.

ಈ‌ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿ ಕುಲಪತಿ ಡಾ. ಅರುಣ . ಇನಾಮದಾರ, ರಜಿಸ್ಟ್ರಾರ ಡಾ. ಆರ್. ವಿ. ಕುಲಕರ್ಣಿ, ಸಂಸ್ಥೆಯ ಆಡಳಿತಾಧಿಕಾರಿಗಳಾದ ಪ್ರೊ. ವಿಲಾಸ ಎಸ್. ಬಗಲಿ, ಡಾ. ಅಶೋಕ‌ ಎಂ. ಲಿಮಕರ, ದೈಹಿಕ ಶಿಕ್ಷಣ ನಿರ್ದೇಶಕ‌ ಎಸ್. ಎಸ್. ಕೋರಿ, ನಾನಾ ವಿಭಾಗಗಳ ಡಾ. ಕುಸಾಲ ದಾಸ, ಡಾ. ಎಂ. ಎಸ್. ಮದಭಾವಿ, ವಿ. ಡಿ. ಐಹೊಳ್ಳಿ, ಡಾ. ಆರ್. ಎಂ. ಮಿರ್ದೆ, ಡಾ. ಪಿ. ಮಂಜುನಾಥ, ನರ್ಸಿಂಗ್ ಕಾಲೇಜಿನ ಸಿಬ್ಬಂದಿ, ನಾನಾ ಕಾಲೇಜುಗಳ ಸಿಬ್ಬಂದಿ ಮುಂತಾದವರು ಉಪಸ್ಥಿತರಿದ್ದರು.

ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಪ್ರಾರ್ಥಿಸಿ, ಸಂಸ್ಥೆಯ ಗೀತೆಯನ್ನು ಹಾಡಿದರು. ನರ್ಸಿಂಗ್ ಕಾಲೇಜಿನ ಉಪಪ್ರಾಚಾರ್ಯೆ ಡಾ. ಸುಚಿತ್ರಾ ಎ. ರಾಠಿ ಪರಿಚಯಿಸಿ ಸ್ವಾಗತಿಸಿದರು. ಆಡಳಿತಾಧಿಕಾರಿ ಪ್ರೊ. ಐ. ಎಸ್. ಕಾಳಪ್ಪನವರ ಪ್ರಾಸ್ತಾವಿಕವಾಗಿ ಮಾತನಾಡಿದರು. ‌ ಡಾ. ಜಯಶ್ರೀ ಪೂಜಾರಿ ಪ್ರತಿಭಾ ಪುರಸ್ಕಾರ ನಡೆಸಿಕೊಟ್ಟರು. ಡಾ. ಸುಭಾಸ ಕನ್ನೂರ ಮತ್ತು ಡಾ. ಉಷಾದೇವಿ ಹಿರೇಮಠ ನಿರೂಪಿಸಿದರು. ಡಾ. ಅಮೀತಕುಮಾರ ಬಿರಾದಾರ ವಂದಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande