
ರಾಯಚೂರು, 25 ಅಕ್ಟೋಬರ್(ಹಿ.ಸ.) :
ಆ್ಯಂಕರ್ : ಸರ್ಕಾರಿ ಶಾಲೆಗಳ ಉಳಿವಿಗಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಶಾಲೆಗಳ ಅಭಿವೃದ್ಧಿಗೊಳಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಅತ್ಯಂತ ಪುರಾತನವಾಗಿದ್ದ ಈ ಶಾಲೆಯನ್ನು ಅಭಿವೃದ್ಧಿಗೊಳಿಸಲು ಒಂದು ಕೋಟಿ ರೂ ವೆಚ್ಚದಲ್ಲಿ ಕಾಂಪೌಂಡ ಸಹಿತ 6 ಹೊಸ ತರಗತಿ ಕೊಠಡಿಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ತಿಳಿಸಿದರು.
ನೇತಾಜಿ ನಗರ ಬಡಾವಣೆಯಲ್ಲಿ ನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೊಸ 6 ಕೊಠಡಿಗಳು ಹಾಗೂ ಶಾಚಾಲಯ, ಕಾಂಪೌಂಡ ಲೋಕಾರ್ಪಣೆ ಮಾತನಾಡಿದರು.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಭಿವೃದ್ಧಿಗೊಳಿಸಲು ಜನರು ಬೇಡಿಕೆಯಿಟ್ಟ ಕಾರಣ ಮೊದಲಿಗೆ ಆದ್ಯತೆ ನೀಡಿ ಈ ಶಾಲೆಯನ್ನು ಅಭಿವೃದ್ಧಿಗೊಳಿಸಲಾಗಿದೆ. ಶಿಥಿಲಾವಸ್ಥೆಯಲ್ಲಿರುವ ಅತ್ಯಂತ ಪುರಾತನವಾದ ಶಾಲೆಗಳನ್ನು ಪುನಶ್ಚೇತನ ಗೊಳಿಸಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಪ್ರತ್ಯೇಕವಾಗಿ ಅನುದಾನ ಮಂಜೂರು ಮಾಡಲು ಈಗಾಗಲೇ ಬೇಡಿಕೆಯನ್ನು ಇಡಲಾಗಿದೆ.
ಬಡಾವಣೆಗಳಲ್ಲಿರುವ ಸರಕಾರಿ ಶಾಲೆಗಳನ್ನು ಸಾರ್ವಜನಿಕರು ಹಾಗೂ ಮಕ್ಕಳ ಪಾಲಕರು ತಮ್ಮ ಮಾನೆಯಂತೆ ನೋಡಿಕೊಂಡು ಸಂರಕ್ಷಿಸಬೇಕು. ಶಾಲಾ ಮಕ್ಕಳ ಶಿಕ್ಷಣಕ್ಕಾಗಿ ಮದ್ಯಾಹ್ನದ ಬಿಸಿ ಊಟ, ಸಮವಸ್ತ್ರ, ನೋಟ್ ಪುಸ್ತಕಗಳು ಸೇರಿದಂತೆ ಎಲ್ಲಾ ರೀತಿಯ ಸೌಲಭ್ಯಗಳನ್ನ ನೀಡಲಾಗುತ್ತಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಮರಳಿ ಕರೆತಂದು ಶೈಕ್ಷಣಿಕ ಅಭಿವೃದ್ಧಿಗೆ ಪ್ರಯತ್ನಿಸಬೇಕಾದ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಸಾರ್ವಜನಿಕರಿಗೆ ತಿಳಿಸಿದರು
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಯಚೂರಿನಲ್ಲಿ ಅನೇಕ ಜನಪರ ಯೋಜನೆಗಳನ್ನ ಜಾರಿಗೆ ತಂದಿದ್ದೇವೆ. ಕಳೆದ ವರ್ಷ ನಗರಸಭೆ ಯಾಗಿದ್ದ ರಾಯಚೂರ ನಗರವನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೆರಿಸಲಾಗಿದೆ.
ನಗರದ ಚಂದ್ರಮೌಳೇಶ್ವರ ವೃತ್ತದ ಮೂಲಕ ಗಂಜ್ ವೃತ್ತಕ್ಕೆ ಸಂಪರ್ಕಿಸುವ ರಸ್ತೆಯನ್ನು 30 ಕೋಟಿ ರೂ ವೆಚ್ಚದಲ್ಲಿ ನಾಲ್ಕು ಪತದ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಯಾವುದೇ ಅಭಿವೃದ್ಧಿ ಕೆಲಸಗಳು ಸುಗಮವಾಗಿ ನಡೆಯಬೇಕಾದರೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಹಾಗಾಗಿ ನಗರದಾದ್ಯಂತ ನಡೆಯುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಎಲ್ಲರೂ ಸಹಕರಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸೋಮವಾರಪೇಟೆ ಹಿರೇಮಠದ ರಾಥೋಟಿ ವೀರ ಶಿವಾಚಾರ್ಯ ಮಹಾಸ್ವಾಮಿಗಳು, ಮಹಾನಗರ ಪಾಲಿಕೆಯ ಮಹಾಪೌರರಾದ ನರಸಮ್ಮ ನರಸಿಂಹಲು ಮಾಡಗಿರಿ, ಉಪ ಮಹಾಪೌರರಾದ ಸಾಜಿದ್ ಸಮೀರ್, ಹಿರಿಯರಾದ ಜಯಣ್ಣ, ಕೆ ಶಾಂತಪ್ಪ, ಮೊಹ್ಮದ್ ಶಾಲಂ, ಶಿವಮೂರ್ತಿ, ರುದ್ರಪ್ಪ ಅಂಗಡಿ, ತಿಮ್ಮಾರೆಡ್ಡಿ, ಬಿ ರಮೇಶ್, ಶಾಮ್ ಸುಂದರ್, ರಸೂಲ್ ಸಾಬ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್