

ಹೊಸಪೇಟೆ, 25 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ನ.03 ರಿಂದ ನ.19 ರವರೆಗೆ ನಡೆಯಲಿರುವ ಕುಷ್ಠರೋಗ ಪತ್ತೆಹಚ್ಚುವ ಆಂದೋಲನ ಕಾರ್ಯಕ್ರಮವನ್ನು ಒಟ್ಟು 624 ತಂಡಗಳಿಂದ 1,74,693 ಮನೆಗಳನ್ನು 14 ದಿನಗಳಲ್ಲಿ ಸಮೀಕ್ಷೆ ನಡೆಸಲು ಕ್ರಿಯಾಯೋಜನೆಯನ್ನು ರೂಪಿಸಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದ ಯಶ್ವಸಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಹಕರಿಸಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಲ್.ಆರ್.ಶಂಕರನಾಯ್ಕ ಹೇಳಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಚರ್ಮದ ಮೇಲ್ಬಾಗದಲ್ಲಿ ಮಚ್ಚೆಗಳು, ದೇಹದ ಯಾವುದೇ ಭಾಗದಲ್ಲಿ ತಿಳಿಬಿಳಿ ಅಥವಾ ತಾಮ್ರ ಬಣ್ಣದ ಒಂದು, ಹಲವಾರು ಮಚ್ಚೆಗಳು ಈ ಮಚ್ಚೆಗಳ ಮೇಲೆ ಸ್ಪರ್ಶಜ್ಞಾನ ಇರದೇ ಇರುವುದು ಇಂತಹ ಯಾವುದೇ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ನಿಮ್ಮ ಹತ್ತಿರದ ಆಸ್ಪತ್ರೆಗಳಿಗೆ ಭೇಟಿ ನೀಡಿ ಚಿಕಿತ್ಸೆಗೆ ಮುಂದಾಗಬೇಕು. ಕುಷ್ಠ ರೋಗವನ್ನು ಪತ್ತೆ ಹಚ್ಚಲು ಹಲವು ವಿಧಾನಗಳಿದ್ದು, ಆಂದೋಲನದ ಮೂಲಕ ಪ್ರತಿ ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಾಗುವುದು ಎಂದರು.
ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ರಾಧಿಕಾ.ಕೆ ಪ್ರಾಸ್ತಾವಿಕವಾಗಿ ಮಾತನಾಡಿ ಜಿಲ್ಲೆಯಲ್ಲಿ 76 ಕುಷ್ಠರೋಗ ಪ್ರಕರಣಗಳಿಗೆ ಚಿಕಿತ್ಸೆ ನೀಡುತ್ತಿದ್ದು, ಹೆಚ್ಚಿನ ಪ್ರಕರಣಗಳನ್ನು ಆರಂಭಿಕ ಹಂತದಲ್ಲೇ ಪತ್ತೆ ಮಾಡಿ ಚಿಕಿತ್ಸೆ ನೀಡಿದ್ದಾರೆ. ಇದರಿಂದ ಮುಂದೆ ಉಂಟಾಗುವ ಅಂಗವೈಕಲ್ಯತೆಯನ್ನು ತಡೆಗಟ್ಟಲು ಇತ್ತೀಚಿನ ವರ್ಷಗಳಲ್ಲಿ ಕುಷ್ಠರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಅಂಗವೈಕಲ್ಯವನ್ನು ತಡೆಗಟ್ಟುವತ್ತ ಹೆಚ್ಚಿನ ಗಮನ ನೀಡಲಾಗಿದೆ. ಸಾಂಕ್ರಾಮಿಕ ರೋಗಗಳಲ್ಲಿ, ರೋಗದ ಹೊರೆಯನ್ನು ಕಡಿಮೆ ಮಾಡಲು ವ್ಯಾಪಕ ಪ್ರಯತ್ನಗಳ ಹೊರತಾಗಿಯೂ, ಕುಷ್ಠರೋಗವು ಜಗತ್ತಿನಲ್ಲಿ ಬಾಹ್ಯ ನರರೋಗ ಮತ್ತು ಅಂಗವೈಕಲ್ಯಕ್ಕೆ ಪ್ರಮುಖ ಕಾರಣವಾಗಿದೆ. ಕುಷ್ಠರೋಗದಿಂದಾಗಿ ರೋಗದ ಹೊರೆಯನ್ನು ಮತ್ತಷ್ಟು ಕಡಿಮೆ ಮಾಡಲು ವರ್ಧಿತ ಜಾಗತಿಕ ಕಾರ್ಯತಂತ್ರವನ್ನು ಪ್ರಾರಂಭಿಸಿದೆ ಎಂದರು.
ಬಳಿಕ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಕುಷ್ಠರೋಗ ಪತ್ತೆಹಚ್ಚುವ ಆಂದೋಲನದ ಪೆÇೀಸ್ಟರ್ ಮತ್ತು ಕರಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಷಣ್ಮುಖ ನಾಯ್ಕ ಮಾತನಾಡಿ, ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲಾ ಜಿಲ್ಲೆಗಳಲ್ಲಿ 60 ದಿನಗಳ ತಂಬಾಕುಮುಕ್ತ ಯುವ ಅಭಿಯಾನ 3.0 ಅನುμÁ್ಠನಗೊಳಿಸಲಾಗಿದೆ. ತಂಬಾಕು ಬಳಕೆಯಿಂದ ದೇಶದಲ್ಲಿ ವಾರ್ಷಿಕವಾಗಿ 13.5 ಲಕ್ಷ ಸಾವುಗಳು ಸಂಭವಿಸುತ್ತಿದೆ. ಮಕ್ಕಳು ಹದಿಹರೆಯದಲ್ಲೇ ತಂಬಾಕು ಸೇವನೆ ಮಾಡುವ ಪ್ರಮಾಣ ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ. ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ 2003 ತಿದ್ದುಪಡಿಯಾಗಿದ್ದು, ಕಾಯ್ದೆಯ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಬಳಕೆ ಮಾಡುವಂತಿಲ್ಲ, ಶಿಕ್ಷಣ ಸಂಸ್ಥೆಗಳ ಅವರಣದ 100 ಮೀಟರ್ ಒಳಗೆ ತಂಬಾಕು ಉತ್ಪನ್ನಗಳ ಮಾರಾಟ ಶಿಕ್ಷಾರ್ಹ ಅಪರಾಧವಾಗಿದೆ. ಶಿಕ್ಷಣ ಇಲಾಖೆಯ ವತಿಯಿಂದ ವಿದ್ಯಾರ್ಥಿಗಳಿಗೆ ತಂಬಾಕಿನ ಬಳಕೆಯಿಂದ ಆಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.
ಬಳ್ಳಾರಿ ಜಿಲ್ಲಾ ಸೇವಾ ವೈದ್ಯಕೀಯ ಅಧಿಕಾರಿ ಡಾ.ಶ್ರೀಧರ.ಬಿ ಮಾತನಾಡಿ, ಭಾರತ ಸರ್ಕಾರವು ಡಿ.26 ಕ್ಕೆ ದಡಾರ ಮತ್ತು ರುಬೆಲ್ಲಾವನ್ನು ಮುಕ್ತಾಯಗೊಳಿಸಲು ಗುರಿಯನ್ನು ಹೊಂದಲಾಗಿದೆ. ಹಾಗಾಗಿ ಎಲ್ಲಾ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕಿದೆ. ದಡಾರ ಮತ್ತು ರುಬೆಲ್ಲಾ ವೈರಾಣುವಿನಿಂದ ಬರುವ ಕಾಯಿಲೆಯಾಗಿದ್ದು, ಕೆಮ್ಮು ಮತ್ತು ಸೀನುವುದರ ಮೂಲಕ ಇತರರಿಗೆ ಹರಡುತ್ತದೆ. ದಡಾರದಿಂದ ನ್ಯೂಮೋನಿಯಾ, ಅತಿಸಾರ ಭೇದಿ, ಮೆದುಳಿನ ಸೋಂಕಿನಂತಹ ಕಾಯಿಲೆಗಳಿಗೆ ತುತ್ತಾಗುವ ಸಾಧ್ಯತೆ ಇದೆ. ಹಾಗೆಯೇ ತುರಿಕೆ, ವಿಪರೀತ ಜ್ವರ, ಕೆಮ್ಮು, ನೆಗಡಿ ಮತ್ತು ಕೆಂಗಣ್ಣು ದಡಾರದ ಮುಖ್ಯ ಲಕ್ಷಣಗಳಾಗಿವೆ. ಇದು ಬಾರದಂತೆ ಎಚ್ಚರಿಕೆ ವಹಿಸಲು ಜನಜಾಗೃತಿ ಮೂಡಿಸುವ ಅಗತ್ಯವಿದೆ. ರುಬೆಲ್ಲಾ ರೋಗವು ಗರ್ಭಿಣಿಯರಲ್ಲಿ ಕಾಣಿಸಿಕೊಂಡಾಗ ಹುಟ್ಟುವ ಮಕ್ಕಳಲ್ಲಿ ಗ್ಲೂಕೋಮ, ಕಣ್ಣಿನ ಪೆÇರೆ, ಕಿವುಡುತನ, ಮೆದಳು ಜ್ವರ, ಮಾನಸಿಕ ಆಸ್ವಸ್ಥತೆ, ಬುದ್ಧಿ ಮಾಂದ್ಯತೆ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗುವ ಸಾಧ್ಯತೆ ಇದೆ. ಆದ್ದರಿಂದ ವಿಶೇಷ ಗಮನ ಹರಿಸಿ ವೈದ್ಯರು ಕಾಳಜಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.
ಈ ವೇಳೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಜಂಬಯ್ಯ, ಜಿಲ್ಲಾ ವೈದ್ಯಾಧಿಕಾರಿ ಡಾ.ಹರಿಪ್ರಸಾದ್, ಡಾ.ಭಾಸ್ಕರ್ ಸೇರಿದಂತೆ ತಾಲೂಕು ವೈದ್ಯಾಧಿಕಾರಿಗಳು, ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್