
ನವದೆಹಲಿ, 25 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ನವೆಂಬರ್ 2ರಿಂದ 4ರವರೆಗೆ ಉತ್ತರಾಖಂಡಕ್ಕೆ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ಕಚೇರಿ ಬಿಡುಗಡೆ ಮಾಡಿದ ಅಧಿಕೃತ ವೇಳಾಪಟ್ಟಿಯ ಪ್ರಕಾರ, ಅವರು ಕುಮಾವೂನ್ ಮತ್ತು ಗರ್ವಾಲ್ ಪ್ರದೇಶಗಳ ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ನವೆಂಬರ್ 2 ರಂದು ಡೆಹ್ರಾಡೂನ್‌ಗೆ ಆಗಮಿಸಲಿದ್ದು ಹರಿದ್ವಾರದಲ್ಲಿನ ಪತಂಜಲಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ನವೆಂಬರ್ 3 ರಂದು ಉತ್ತರಾಖಂಡ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಭಾಷಣ ಮಾಡಲಿದ್ದು, ನವೆಂಬರ್ 4ರಂದು ಕೈಂಚಿ ಧಾಮಕ್ಕೆ ಭೇಟಿ ನೀಡಿ ಕುಮಾವೂನ್ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa