
ಬೆಂಗಳೂರು, 26 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬೆಂಗಳೂರು ನಗರದಲ್ಲಿ ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ ಪರಿವರ್ತನೆ ಮಾಡುವ ಸರ್ಕಾರದ ಯೋಜನೆಗೆ ಟೀಕೆ ಮಾಡುತ್ತಿರುವ ಎಚ್.ಡಿ. ಕುಮಾರಸ್ವಾಮಿಯ ವಿರುದ್ಧ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.
ಕಬ್ಬನ್ ಪಾರ್ಕ್‌ನಲ್ಲಿ ನಡೆದ ‘ಬೆಂಗಳೂರು ನಡಿಗೆ’ ಕಾರ್ಯಕ್ರಮದ ವೇಳೆ ಮಾತನಾಡಿದ ಅವರು, “ಎ ಖಾತಾ ಪರಿವರ್ತನೆ ನಮ್ಮ ಸರ್ಕಾರದ 6ನೇ ಗ್ಯಾರಂಟಿ. ಸಾರ್ವಜನಿಕರ ಆಸ್ತಿ ದಾಖಲೆಗಳನ್ನು ಸರಿಪಡಿಸಿ, ಅವರಿಗೆ ನೀಡುವುದು ನಮ್ಮ ಜವಾಬ್ದಾರಿ. ಇದಕ್ಕಾಗಿ ಕೇವಲ 5% ಅಭಿವೃದ್ಧಿ ಶುಲ್ಕ ಪಾವತಿ ಮಾಡಬೇಕಾಗಿದೆ” ಎಂದು ಹೇಳಿದರು.
ಈ ವೇಳೆ ನಾಗರಿಕರೊಬ್ಬರು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿ, ವರ್ಷಗಳಿಂದ ನಿರೀಕ್ಷಿಸುತ್ತಿದ್ದ ಕ್ರಮ ಈಗ ಜಾರಿಗೆ ಬಂದಿರುವುದಕ್ಕೆ ಧನ್ಯವಾದ ವ್ಯಕ್ತಪಡಿಸಿದರು. ನಾಗರಿಕರ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿ, ಕುಮಾರಸ್ವಾಮಿಯ ಟೀಕೆಯನ್ನು “ಖಾಲಿ ಟ್ರಂಕ್” ಎಂದು ವ್ಯಂಗ್ಯವಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa