ನೃಪತುಂಗ ಬೆಟ್ಟ ಅಭಿವೃದ್ಧಿಗೆ ಯೋಜನಾ ವರದಿ ಸಲ್ಲಿಸಲು ಅರ್ಜಿ ಆಹ್ವಾನ
ಧಾರವಾಡ, 26 ಅಕ್ಟೋಬರ್ (ಹಿ.ಸ.) : ಆ್ಯಂಕರ್ : 2025-26 ನೇ ಸಾಲಿನ ಮುಖ್ಯಮಂತ್ರಿಗಳ ಆಯವ್ಯಯ ಘೋಷಣೆಯಂತೆ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸುವ ಕುರಿತ ಘೋಷಣೆಯಂತೆ ಧಾರವಾಡ ಜಿಲ್ಲೆ ಹುಬ್ಬಳ್ಳಿಯ ನೃಪತುಂಗ ಬೆಟ್ಟ ಪ್ರವಾಸಿ ತಾಣವನ್ನು ಐದು ಕೋಟಿಗಳ ಅಂದಾಜು ಮೊತ್ತದಲ್ಲಿ ವಿವಿಧ ಪ್ರವಾಸಿ ಸೌಲಭ್ಯ, ಕ
ನೃಪತುಂಗ ಬೆಟ್ಟ ಅಭಿವೃದ್ಧಿಗೆ  ಯೋಜನಾ ವರದಿ ಸಲ್ಲಿಸಲು ಅರ್ಜಿ ಆಹ್ವಾನ


ಧಾರವಾಡ, 26 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : 2025-26 ನೇ ಸಾಲಿನ ಮುಖ್ಯಮಂತ್ರಿಗಳ ಆಯವ್ಯಯ ಘೋಷಣೆಯಂತೆ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸುವ ಕುರಿತ ಘೋಷಣೆಯಂತೆ ಧಾರವಾಡ ಜಿಲ್ಲೆ ಹುಬ್ಬಳ್ಳಿಯ ನೃಪತುಂಗ ಬೆಟ್ಟ ಪ್ರವಾಸಿ ತಾಣವನ್ನು ಐದು ಕೋಟಿಗಳ ಅಂದಾಜು ಮೊತ್ತದಲ್ಲಿ ವಿವಿಧ ಪ್ರವಾಸಿ ಸೌಲಭ್ಯ, ಕಾಮಗಾರಿಗಳನ್ನು ಅಭಿವೃದ್ಧಿ ಪಡಿಸಲು ನಿರ್ಣಯಿಸಲಾಗಿದೆ.

ಈ ಸಂಬಂಧ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಸಿದ್ದಪಡಿಸಬೇಕಾಗಿದೆ. ಕಾರಣ ಐದು ಕೋಟಿ ಮೀರದಂತೆ ಜಿಎಸ್‍ಟಿ ಒಳಗೊಂಡ ವಿವರವಾದ ಯೋಜನಾ ವರದಿಯನ್ನು ಸಿದ್ದಪಡಿಸಿ ನೀಡಲು ಸಂಬಂಧಿಸಿದ ಅರ್ಹ ಸಂಸ್ಥೆ, ವ್ಯಕ್ತಿಗಳಿಂದ ಅಲ್ಪಾವಧಿ ದರಪಟ್ಟಿ ಆಹ್ವಾನಿಸಲಾಗಿದೆ.

ಆಸಕ್ತರು ತಮ್ಮ ದರಪಟ್ಟಿಯನ್ನು ಲಕೋಟೆಯಲ್ಲಿ ಅಕ್ಟೋಬರ್ 31, 2025 ರ ಸಂಜೆ 4 ಗಂಟೆಯೊಳಗೆ ಧಾರವಾಡ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2955522 ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande