ಡಿವಿಜಿ ಸ್ಮಾರ್ಟ್ ಹೆಲ್ಪ್ ಮೊಬೈಲ್ ಅಪ್ಲಿಕೇಶನ್ ಮೂಲಕ ದೂರು ದಾಖಲಿಸಲು ಮನವಿ
ದಾವಣಗೆರೆ, 26 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಮಹಾನಗರ ಪಾಲಿಕೆ ಹಾಗೂ ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಾಗರಿಕ ಸೇವೆ ಮತ್ತು ಸಾರ್ವಜನಿಕ ಕುಂದುಕೊರತೆ ನಿರ್ವಹಣೆ ವ್ಯವಸ್ಥೆಯನ್ನು ಸುಧಾರಿಸುವತ್ತ ಒಂದು ಪ್ರಮುಖ ಹೆಜ್ಜೆಯಾಗಿ ಡಿವಿಜಿ ಸ್ಮಾರ್ಟ್ ಹೆಲ್ಪ್ ಎಂಬ ಮೊಬೈಲ್ ಅಪ್ಲಿಕೇಷನ್ ಅಭ
ಡಿವಿಜಿ ಸ್ಮಾರ್ಟ್ ಹೆಲ್ಪ್ ಮೊಬೈಲ್ ಅಪ್ಲಿಕೇಶನ್ ಮೂಲಕ ದೂರು ದಾಖಲಿಸಲು ಮನವಿ


ದಾವಣಗೆರೆ, 26 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಮಹಾನಗರ ಪಾಲಿಕೆ ಹಾಗೂ ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಾಗರಿಕ ಸೇವೆ ಮತ್ತು ಸಾರ್ವಜನಿಕ ಕುಂದುಕೊರತೆ ನಿರ್ವಹಣೆ ವ್ಯವಸ್ಥೆಯನ್ನು ಸುಧಾರಿಸುವತ್ತ ಒಂದು ಪ್ರಮುಖ ಹೆಜ್ಜೆಯಾಗಿ ಡಿವಿಜಿ ಸ್ಮಾರ್ಟ್ ಹೆಲ್ಪ್ ಎಂಬ ಮೊಬೈಲ್ ಅಪ್ಲಿಕೇಷನ್ ಅಭಿವೃದ್ಧಿಪಡಿಸಿದ್ದು, ಪ್ರಸ್ತುತ ಸಾರ್ವಜನಿಕರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗಕ್ಕೆ ಸಂಬಂಧಿಸಿದಂತೆ ಮುಖ್ಯವಾಗಿ ಫನತ್ಯಾಜ್ಯ ನಿರ್ವಹಣೆ ಸಂಬಂಧಿಸಿದಂತೆ ಈ ಮೊಬೈಲ್ ಅಪ್ಲಿಕೇಷನ್‍ನಲ್ಲಿ ದೂರು ದಾಖಲಿಸುವ ಮೂಲಕ ನಿಗಧಿತ ಸಮಯದಲ್ಲಿ ಪರಿಹಾರವನ್ನು ಪಡೆದುಕೊಳ್ಳಬಹುದು.

ಸಾರ್ವಜನಿಕರು ತಮ್ಮ ಮೊಬೈಲ್ ಪ್ಲೇ ಸ್ಟೋರ್‍ನಲ್ಲಿ ಕ್ಯೂ ಆರ್ ಕೋಡ್ ಅಥವಾ ಲಿಂಕ್ https://play.google.com/store/apps/details?id=com.dvgsmart.helpಉಪಯೋಗಿಸಿ ಡಿವಿಜಿ ಸ್ಮಾರ್ಟ್ ಹೆಲ್ಪ್ ಅಪ್ಲಿಕೇಷನ್ ಡೌನ್ ಲೋಡ್ ಮಾಡಿದ ನಂತರ ಮೊದಲ ಬಾರಿಗೆ ಮೊಬೈಲ್ ಅಪ್ಲಿಕೇಷನ್‍ನಲ್ಲಿ ತಮ್ಮ ಮೊಬೈಲ್ ನಂಬರ್, ಇ-ಮೇಲ್ ಐಡಿ ನೀಡುವ ಮೂಲಕ ಒಂದು ಬಾರಿ ನೊಂದಣಿ ಆಗಬೇಕಾಗಿರುತ್ತದೆ. ತದನಂತರ ದೂರುಗಳನ್ನು ಛಾಯಾಚಿತ್ರಗಳೊಂದಿಗೆ ಮೊಬೈಲ್ ಅಪ್ಲಿಕೇಷನ್ ಸಲ್ಲಿಸಲು, ಸ್ವೀಕೃತಿಗಳನ್ನು ಪಡೆಯಲು ಮತ್ತು ನಿಗದಿತ ಸಮಯದಲ್ಲಿ ದೂರು ಪರಿಹಾರವಾಗುವ ಬಗ್ಗೆ ಪರಿಶೀಲಿಸಲು ಅವಕಾಶವಿದೆ.

ಪ್ರಸ್ತುತ ಫನತ್ಯಾಜ್ಯ ನಿರ್ವಹಣೆ ಸಂಬಂಧಿಸಿದಂತೆ ದೂರುಗಳನ್ನು ಮೊಬೈಲ್ ಅಪ್ಲಿಕೇಷನ್ ಡ್ರಾಪ್ ಡೌನ್‍ನಲ್ಲಿ ನಮೂದಾಗಿದ್ದು, ಮುಂದಿನ ದಿನಗಳಲ್ಲಿ ಮಹಾನಗರ ಪಾಲಿಕೆಗೆ ಸಂಬಂಧಿಸಿದ ಇತರೆ ದೂರುಗಳನ್ನು ಸಹ ನೋಂದಾಯಿಸಲು ಅವಕಾಶ ನೀಡಲಾಗಿದೆ ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande