ಮತ ಕಳ್ಳತನ ವಿರುದ್ದ ಕೋಲಾರದಲ್ಲಿ ಬಿಜೆಪಿ ವಿರುದ್ದ ಕಾಂಗ್ರೆಸ್ ಪ್ರತಿಭಟನೆ
ಮತ ಕಳ್ಳತನ ವಿರುದ್ದ ಕೋಲಾರದಲ್ಲಿ ಕಾಂಗ್ರೆಸ್ ಬಿಜೆಪಿ ವಿರುದ್ದ ಕಾಂಗ್ರೆಸ್ ಪ್ರತಿಭಟನೆ
ಚಿತ್ರ ; ಕೋಲಾರ ನಗರದ ಹೊಸ ಬಸ್ ನಿಲ್ದಾಣ ಬಳಿ ಬಿಜೆಪಿ ಸರ್ಕಾರದ ಏಜೆಂಟ್ ನಂತೆ ವರ್ತಿಸುತ್ತಿರುವ ಚುನಾವಣಾ ಆಯೋಗದ ಮತ ಕಳ್ಳತನ ವಿರುದ್ಧ ಪ್ರತಿಭಟನೆ ಮಾಡಿ ಸಹಿ ಸಂಗ್ರಹ ಕಾರ್ಯಕ್ರಮ ಹಮ್ಮಿಕೋಳ್ಳಲಾಗಿತ್ತು


ಚಿತ್ರ ; ಕೋಲಾರ ನಗರದ ಹೊಸ ಬಸ್ ನಿಲ್ದಾಣ ಬಳಿ ಬಿಜೆಪಿ ಸರ್ಕಾರದ ಏಜೆಂಟ್ ನಂತೆ ವರ್ತಿಸುತ್ತಿರುವ ಚುನಾವಣಾ ಆಯೋಗದ ಮತ ಕಳ್ಳತನ ವಿರುದ್ಧ ಪ್ರತಿಭಟನೆ ಮಾಡಿ ಸಹಿ ಸಂಗ್ರಹ ಕಾರ್ಯಕ್ರಮ ಹಮ್ಮಿಕೋಳ್ಳಲಾಗಿತ್ತು


ಕೋಲಾರ, ೨೭ ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಒಂದೇ ಮನೆಯಲ್ಲಿ ಸುಮಾರು ೧೦ ಸಾವಿರ ಜನರ ಇದ್ದಾರೆ ಅಂತ ವಿಳಾಸ ತೋರಿಸ್ತಿದ್ದಾರೆ. ಇದು ಹೇಗೆ ಸಾಧ್ಯ? ಮತಗಳ್ಳತನ ನಡೆದಿರುವುದು ಇದರಿಂದಲೇ ತಿಳಿಯುತ್ತದೆ ಮತಗಳ್ಳತನದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ಆಗ್ರಹಿಸಿದರು.

ಕೋಲಾರ ನಗರದ ಹೊಸ ಬಸ್ ನಿಲ್ದಾಣ ಬಳಿ ಬಿಜೆಪಿ ಸರ್ಕಾರದ ಏಜೆಂಟ್ ನಂತೆ ವರ್ತಿಸುತ್ತಿರುವ ಚುನಾವಣಾ ಆಯೋಗದ ಮತ ಕಳ್ಳತನ ವಿರುದ್ಧ ಪ್ರತಿಭಟನೆ ಮಾಡಿ ಸಹಿ ಸಂಗ್ರಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಅಂಬೇಡ್ಕರ್ ಕೊಟ್ಟಿರುವ ಸಂವಿಧಾನವನ್ನು ಬಿಜೆಪಿ ಅನುಸರಿಸಿದ್ದಾರಾ ದೇಶದಲ್ಲಿ ಬಿಜೆಪಿಯವರು ಮತಗಳ್ಳತನದ ಮೂಲಕ ಗೆದ್ದಿದ್ದಾರೆ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗಕ್ಕೆ ಮತಗಳ್ಳತನ ಆಗಿದೆ ಎಂದು ದೂರು ನೀಡಿದರೆ, ಮತಗಳ್ಳತನ ಆಗಿಲ್ಲ ಕ್ಷಮಾಪಣೆ ಕೇಳಬೇಕು ಅಂತಾರೆ. ಇಂತಹ ಅನ್ಯಾಯಗಳು ನಮ್ಮ ದೇಶದಲ್ಲಿ ನಡೆಯುತ್ತಿವೆ. ಮತಗಳ್ಳತನ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಳ್ಳಿ ಹಳ್ಳಿಗೂ ಹೋಗಿ ಮತಗಳ್ಳತನದ ಬಗ್ಗೆ ಮಾಹಿತಿ ನೀಡಬೇಕು ಎಂದರು.

ಚುನಾವಣಾ ಆಯೋಗ ಬಿಜೆಪಿಯ ಅಂಗಸಂಸ್ಥೆಯಂತೆ ಕೆಲಸ ಮಾಡುತ್ತಿದೆ. ಪರಿಣಾಮ ಇಡೀ ದೇಶದ ಚುನಾವಣಾ ಪ್ರಕ್ರಿಯೆಯೇ ಬುಡಮೇಲಾಗಿದೆ. ಚುನಾವಣಾ ವ್ಯವಸ್ಥೆಯಲ್ಲೇ ಅಕ್ರಮ ಎಸಗಿಬಿಟ್ಟರೆ ಬಿಜೆಪಿಯ ಗೆಲುವು ಸುಲಭ. ಹೀಗಾಗಿ ಚುನಾವಣಾ ಆಯೋಗ ಮತ್ತು ಬಿಜೆಪಿ ಜಂಟಿಯಾಗಿಯೇ ಈ ಅಕ್ರಮದಲ್ಲಿ ಶಾಮೀಲಾಗಿದೆ ಮತದಾರರ ಪಟ್ಟಿ ನಿರ್ವಹಣೆಯಲ್ಲಿ ಅಕ್ರಮವಾಗದಂತೆ ನೋಡಿಕೊಳ್ಳುವುದು ಆಯೋಗದ ಮೊದಲ ಕರ್ತವ್ಯ. ಆದರೆ ಮಹದೇವಪುರ

ಕ್ಷೇತ್ರದ ಮತದಾರರ ಪಟ್ಟಿಯಲ್ಲೇ ಚುನಾವಣಾ ಆಯೋಗ ಎಷ್ಟು ಅಕ್ರಮ ಎಸಗಿದೆ ಎಂಬುದು ಗೊತ್ತಾಗುತ್ತದೆ ಎಂದರು.

ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಒಂದು ಮತಕ್ಕೆ ೮೦ ರೂಪಾಯಿ ಕೊಟ್ಟು ೬೦೦೦ ಸಾವಿರ ಮತಗಳನ್ನು ಖರೀದಿ ಮಾಡಿರುವ ಸತ್ಯ ತನಿಖೆಯಿಂದ ಹೊರ ಬಂದಿದೆ. ಚುನಾವಣಾ ಆಯೋಗ ಪಕ್ಷಾತೀತವಾಗಿ ಕೆಲಸ ಮಾಡಬೇಕು. ಒಂದು ಪಕ್ಷದ ಏಜೆಂಟ್ ರೀತಿ ಕೆಲಸ ಮಾಡಬಾರದು ಯಾವುದೋ ಒಂದು ಸರ್ಕಾರದ ಪರ ಕೆಲಸ ಮಾಡುವುದಲ್ಲ ಸಿಬಿಐ, ಇಡಿ, ಚುನಾವಣಾ ಆಯೋಗ ಸೇರಿ ಎಲ್ಲದರಲ್ಲೂ ರಾಜಕೀಯಕರಣಗೊಳಿಸಿದ್ದಾರೆ ಜೊತೆಗೆ ಸುಪ್ರೀಂಕೋರ್ಟ್ ಅನ್ನು ಸಹ ಬೇರೆ ದೃಷ್ಟಿಯಲ್ಲಿ ನೋಡುವ ಹಾಗೆ ಇಟ್ಟಿದ್ದಾರೆ. ಈ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು ಎಂದರು.

ಪ್ರತಿಭಟನೆಯಲ್ಲಿ ಮಾಜಿ ಸಭಾಪತಿ ವಿ.ಆರ್ ಸುದರ್ಶನ್, ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೌತಮ್, ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ್, ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ನಗರ ಬ್ಲಾಕ್ ಅಧ್ಯಕ್ಷ ಸೈಯದ್ ಅಫ್ಸರ್, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತ, ಮುಂತಾದವರು ಭಾಗವಹಿಸಿದ್ದರು.

ಚಿತ್ರ ; ಕೋಲಾರ ನಗರದ ಹೊಸ ಬಸ್ ನಿಲ್ದಾಣ ಬಳಿ ಬಿಜೆಪಿ ಸರ್ಕಾರದ ಏಜೆಂಟ್ ನಂತೆ ವರ್ತಿಸುತ್ತಿರುವ ಚುನಾವಣಾ ಆಯೋಗದ ಮತ ಕಳ್ಳತನ ವಿರುದ್ಧ ಪ್ರತಿಭಟನೆ ಮಾಡಿ ಸಹಿ ಸಂಗ್ರಹ ಕಾರ್ಯಕ್ರಮ ಹಮ್ಮಿಕೋಳ್ಳಲಾಗಿತ್ತು

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande