ಶಾಂತಿ, ಸೌಹಾರ್ದ ಸಭೆ ನಡೆಸಲು ಸೂಚನೆ
ಹಾಸನ, 27 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಗ್ರಾಮಗಳಲ್ಲಿ ಶಾಂತಿ ಮತ್ತು ಸೌಹಾರ್ದ ಸಭೆ ನಡೆಸಲು ನಿಗದಿತ ವೇಳಾಪಟ್ಟಿ ಸಿದ್ಧಪಡಿಸುವಂತೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ ಅವರು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ
Meeting


ಹಾಸನ, 27 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಗ್ರಾಮಗಳಲ್ಲಿ ಶಾಂತಿ ಮತ್ತು ಸೌಹಾರ್ದ ಸಭೆ ನಡೆಸಲು ನಿಗದಿತ ವೇಳಾಪಟ್ಟಿ ಸಿದ್ಧಪಡಿಸುವಂತೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ ಅವರು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳಡಿ ನಡೆದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ತ್ರೈಮಾಸಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ನಾನಾ ಇಲಾಖೆಗಳು ಜಂಟಿಯಾಗಿ ಸಭೆ ನಡೆಸುವುದರಿಂದ ಸ್ಥಳೀಯ ಸಮಸ್ಯೆ ಪರಿಹಾರಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಮಂಜುನಾಥ್ ಅವರು ಮಾತನಾಡಿ ಕಾಡಾಂಚಿನಲ್ಲಿ ವಾಸವಿರುವ ಹಲಸರು, ಮಲೆರು, ಮಲೈಕುಡಿ ಜನಾಂಗದವರು ಅರಣ್ಯ ಪ್ರದೇಶದಲ್ಲಿ ಕಿರು ಉತ್ಪನ್ನ ಸಂಗ್ರಹಿಸಲು ಅವಕಾಶ ಕಲ್ಪಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಪೂರ್ಣಿಮಾ, ಸಕಲೇಶಪುರ ಉಪ ವಿಭಾಗದ ಉಪ ವಿಭಾಗಾಧಿಕಾರಿ ರಾಜೇಶ್, ಡಿವೈಎಸ್ಪಿ ಗಂಗಾಧರಪ್ಪ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ದೂದ್ ಫೀರ್ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande