ಪೌರ ಕಾರ್ಮಿಕರ ಆರೋಗ್ಯ ತಪಾಸಣೆಗೆ ಕ್ರಮ ವಹಿಸುವಂತೆ ಸೂಚನೆ
ಹಾಸನ, 27 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಪೌರ ಕಾರ್ಮಿಕರಿಗೆ ವಿಶ್ರಾಂತಿ ಗೃಹ ಸೌಲಭ್ಯ ಕಲ್ಪಿಸುವುದರ ಜೊತೆಗೆ ಆರೋಗ್ಯ ತಪಾಸಣೆಗೆ ಕ್ರಮವಹಿಸುವಂತೆ ಹಾಸನ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಮಂಜುನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಮ್ಯಾನ್ಯು
Meeting


ಹಾಸನ, 27 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಪೌರ ಕಾರ್ಮಿಕರಿಗೆ ವಿಶ್ರಾಂತಿ ಗೃಹ ಸೌಲಭ್ಯ ಕಲ್ಪಿಸುವುದರ ಜೊತೆಗೆ ಆರೋಗ್ಯ ತಪಾಸಣೆಗೆ ಕ್ರಮವಹಿಸುವಂತೆ ಹಾಸನ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಮಂಜುನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಮ್ಯಾನ್ಯುವಲ್ ಸ್ಕ್ಯಾವೆಂಜರ್ ಗಳ ನಿಯೋಜನೆ ನಿಷೇಧ ಮತ್ತು ಅದರ ಪುನರ್ವಸತಿ ಅಧಿನಿಯಮ 2013 ರನ್ವಯ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಪೌರಕಾರ್ಮಿಕರಿಗೆ ಬೆಳಗಿನ ಉಪಹಾರ ಮತ್ತು ಸುರಕ್ಷತಾ ಪರಿಕರಗಳನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಪೌರಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪೌರ ಕಾರ್ಮಿಕರಿಗೆ ಇ.ಪಿ.ಎಫ್ ಮತ್ತು ಪಿ.ಎಫ್.ಹಣ ಪಾವತಿ ಆಗುತ್ತಿರುವ ಬಗ್ಗೆ ಪರಿಶೀಲನೆ ಮಾಡುವಂತೆ ಸೂಚಿಸಿದರು.

ಪೌರ ಕಾರ್ಮಿಕರಿಗೆ ಸುರಕ್ಷಾ ಪರಿಕರಗಳನ್ನು ನೀಡಲಾಗಿದೆಯಾ ಅವುಗಳ ಬಳಕೆ ಮಾಡುತ್ತಿರುವ ಬಗ್ಗೆ ಪರಿಶೀಲನೆ ಮಾಡಲು ಸೂಚಿಸಿದರಲ್ಲದೆ, ವರ್ಷಕ್ಕೆ ಮೂರು ಬಾರಿ ಸುರಕ್ಷಾ ಪರಿಕರಗಳನ್ನು ನೀಡುವಂತೆ ತಿಳಿಸಿದರು. ನಗರಗಳಲ್ಲಿ ಸ್ವಚ್ಚತೆ ಕಾಪಾಡಲು ನಿಗಾವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande