
ಧಾರವಾಡ, 27 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಪ್ರತಿ ವ್ಯಕ್ತಿಯ ಖಾಸಗಿ ಮತ್ತು ಸಾರ್ವಜನಿಕ ಜೀವನದಲ್ಲಿ ಪ್ರಾಮಾಣಿಕತೆ, ಪಾರದರ್ಶಕತೆ ಅಳವಡಿಸಿಕೊಂಡಾಗ ಮಾತ್ರ ಸ್ವಾಸ್ಥ್ಯ ಮತ್ತು ನೆಮ್ಮದಿಯ ಸಮಾಜ ನಿರ್ಮಾಣ ಸಾಧ್ಯ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ಅವರು ನಗರದ ಆಲೂರು ವೆಂಕಟರಾವ್ ಸಭಾಭವನದಲ್ಲಿ ನಡೆದ “ಜಾಗೃತಿ: ನಮ್ಮ ಒಟ್ಟು ಜವಾಬ್ದಾರಿ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. “ಕಾನೂನಾತ್ಮಕ ಹಾಗೂ ನೈತಿಕ ಶುದ್ಧತೆ ಇರಬೇಕು. ಸಾರ್ವಜನಿಕರೊಂದಿಗೆ ಸುಳ್ಳು ಹೇಳದೆ ಪ್ರಾಮಾಣಿಕ ಸೇವೆ ನೀಡುವುದು ನೌಕರರ ಕರ್ತವ್ಯ,” ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನ ಜಿಲ್ಲಾ ನ್ಯಾಯಾಧೀಶ ರಾಜಕುಮಾರ ಸಿ. ಅವರು, “ಬ್ರಷ್ಟಾಚಾರ ಒಂದು ರೀತಿಯ ಕ್ಯಾನ್ಸರ್; ಅದನ್ನು ಆರಂಭದಲ್ಲೇ ತಡೆಗಟ್ಟಬೇಕು,” ಎಂದು ಹೇಳಿದರು.
ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ನ್ಯಾ.ಪಿಎಫ್. ದೊಡ್ಡಮನಿ ಹಾಗೂ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa