
ಕೋಲಾರ, ೨೭ ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ವಿದ್ಯಾರ್ಥಿಗಳ ಒತ್ತಡದ ಜೀವನದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಸವಾಲಿನ ಕೆಲಸವಾಗಿದೆ ಕ್ರೀಡೆ ಮತ್ತು ಓದಿನ ಜೊತೆಗೆ ಜಗಳ ನಡೆಯಬೇಕಾಗಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು
ಕೋಲಾರ ನಗರದ ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೋಮವಾರ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಉದ್ಘಾಟಿಸ ಮಾತನಾಡಿದ ಅವರು ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಲು ದೇಹ ಸ್ಪಂದಿಸಬೇಕು. ಇದಕ್ಕೆ ನಿರಂತರವಾಗಿ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು ಉತ್ತಮ ಆರೋಗ್ಯವಿದ್ದರೆ ಮಾತ್ರ ಉತ್ತಮ ಮನಸ್ಸು ಇರುತ್ತದೆ ಎಂದು ಸಲಹೆ ನೀಡಿದರು.
ಜೀವನದಲ್ಲಿ ದೈಹಿಕ ಆರೋಗ್ಯ ಬಹಳ ಮುಖ್ಯ. ಆರೋಗ್ಯವೇ ಭಾಗ್ಯ ಎಂಬುದನ್ನು ಮರೆಯಬಾರದು. ವಯಸ್ಸಾದಂತೆ ಒತ್ತಡದ ಕಾರಣಕ್ಕೆ ನಾನಾ ಕಾಯಿಲೆ?ಬರುತ್ತವೆ. ಆರೋಗ್ಯ ಕಾಪಾಡಿಕೊಳ್ಳಲು ದಿನನಿತ್ಯ ಯೋಗ, ವ್ಯಾಯಾಮ ಮಾಡಬೇಕು. ಕ್ರೀಡೆಯು ಜೀವನದ ಭಾಗವಾಗಬೇಕು. ಕ್ರೀಡಾ ಚಟುವಟಿಕೆಗಳಿಂದ?ಮಾನಸಿಕ ನೆಮ್ಮದಿ ಸಿಗುತ್ತದೆ’ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸುಬ್ರಹ್ಮಣ್ಯ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ರಾಜ್ಯ ಅಧ್ಯಕ್ಷ. ಎಸ್ ಚೌಡಪ್ಪ, ಜಿಲ್ಲಾ ಅಧ್ಯಕ್ಷ ಮುರಳಿ ಮೋಹನ್, ನಾಗನಂದ್ ಕೆಂಪರಾಜು , ರತ್ನಪ್ಪ, ಮುಂತಾದವರು ಇದ್ದರು.
ಚಿತ್ರ : ಕೋಲಾರ ನಗರದ ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೋಮವಾರ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಶಾಸಕ ಕೊತ್ತೂರು ಮಂಜುನಾಥ್ ಉದ್ಘಾಟಿಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್