ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ವಿವಾದ ; ನಾಳೆ ಶಾಂತಿ ಸಭೆ
ಕಲಬುರಗಿ, 27 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ನಡೆಸುವ ಕುರಿತು ಉಂಟಾದ ವಿವಾದ ಇದೀಗ ನ್ಯಾಯಾಲಯದ ಅಂಗಳದಲ್ಲಿದೆ. ಕಲಬುರಗಿ ಉಚ್ಚ ನ್ಯಾಯಾಲಯದ ಸೂಚನೆ ಮೇರೆಗೆ ಜಿಲ್ಲಾಡಳಿತವು ಅಕ್ಟೋಬರ್‌ 28ರಂದು ಶಾಂತಿ ಸಭೆ ಕರೆಯುವ ನಿರ್ಧಾರ ಕೈಗೊಂಡಿ
ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ವಿವಾದ ; ನಾಳೆ ಶಾಂತಿ ಸಭೆ


ಕಲಬುರಗಿ, 27 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ನಡೆಸುವ ಕುರಿತು ಉಂಟಾದ ವಿವಾದ ಇದೀಗ ನ್ಯಾಯಾಲಯದ ಅಂಗಳದಲ್ಲಿದೆ. ಕಲಬುರಗಿ ಉಚ್ಚ ನ್ಯಾಯಾಲಯದ ಸೂಚನೆ ಮೇರೆಗೆ ಜಿಲ್ಲಾಡಳಿತವು ಅಕ್ಟೋಬರ್‌ 28ರಂದು ಶಾಂತಿ ಸಭೆ ಕರೆಯುವ ನಿರ್ಧಾರ ಕೈಗೊಂಡಿದೆ.

ಜಿಲ್ಲಾಡಳಿತಕ್ಕೆ ಹೈಕೋರ್ಟ್‌ ನೀಡಿರುವ ನಿರ್ದೇಶನದಂತೆ, ಶಾಂತಿ ಸಭೆ ನಡೆಸಿ ಅದರ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಆದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಳೆ ಬೆಳಗ್ಗೆ 11.30ಕ್ಕೆ ಶಾಂತಿ ಸಭೆ ನಡೆಯಲಿದೆ.

ಸಭೆಗೆ ಆರ್‌ಎಸ್‌ಎಸ್‌, ಭೀಮ್‌ ಆರ್ಮಿ ಸೇರಿದಂತೆ 10 ಸಂಘಟನೆಗಳಿಗೆ ನೋಟಿಸ್‌ ನೀಡಲಾಗಿದೆ. ಪ್ರತಿಯೊಂದು ಸಂಘಟನೆಯಿಂದ ಮೂವರು ಪ್ರತಿನಿಧಿಗಳು ಸಭೆಯಲ್ಲಿ ಹಾಜರಾಗಬೇಕು ಹಾಗೂ ತಮ್ಮ ಲಿಖಿತ ಅಭಿಪ್ರಾಯವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಚಿತ್ತಾಪುರ ಕ್ಷೇತ್ರವು ಸಚಿವ ಪ್ರಿಯಾಂಕ್‌ ಖರ್ಗೆ ಪ್ರತಿನಿಧಿಸುವ ಕ್ಷೇತ್ರವಾಗಿರುವುದರಿಂದ ಈ ಪಥಸಂಚಲನ ವಿಚಾರ ರಾಜಕೀಯ ಬಣ್ಣ ಪಡೆದುಕೊಂಡಿದೆ. ರಾಜ್ಯದ ಇತರೆ ಭಾಗಗಳಲ್ಲಿ ಆರ್‌ಎಸ್‌ಎಸ್‌ ಪಥ ಸಂಚಲನಗಳು ಯಾವುದೇ ತೊಂದರೆ ಇಲ್ಲದೆ ನಡೆಯುತ್ತಿದ್ದರೂ, ಚಿತ್ತಾಪುರದಲ್ಲಿ ಮಾತ್ರ ಕಗ್ಗಂಟು ಮುಂದುವರಿದಿದೆ.

ಪ್ರತಿ ದಿನ ಹೊಸ ತಿರುವು ಪಡೆಯುತ್ತಿರುವ ಈ ವಿವಾದ ಇದೀಗ ಶಾಂತಿ ಸಭೆ ಮೂಲಕ ಪರಿಹಾರ ಕಾಣುವತ್ತ ಕಣ್ಣಿಟ್ಟಿದೆ. ಸಭೆಯ ಬಳಿಕ ಜಿಲ್ಲಾಡಳಿತ ವರದಿ ನ್ಯಾಯಾಲಯಕ್ಕೆ ಸಲ್ಲಿಸಲಿದ್ದು, ನಂತರದ ದಿನಗಳಲ್ಲಿ ಪಥ ಸಂಚಲನಕ್ಕೆ ಅನುಮತಿ ನೀಡಬೇಕೋ ಬೇಡವೋ ಎಂಬ ನಿರ್ಧಾರ ನ್ಯಾಯಾಲಯದ ತೀರ್ಪಿನ ಮೇಲೆ ಅವಲಂಬಿತವಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande