
ಬೆಂಗಳೂರು, 28 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬಂಗಾಳ ಸಾಗರದ ‘ಮೊಂತಾ’ ಚಂಡಮಾರುತದ ಪರಿಣಾಮವಾಗಿ ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಸೈಕ್ಲೋನ್ ಪರಿಣಾಮ ಹವಾಮಾನ ಇಲಾಖೆ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯ ಮುನ್ಸೂಚನೆ ನೀಡಿದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ.
ಉಡುಪಿ ಹಾಗೂ ದಕ್ಷಿಣ ಕನ್ನಡ ಸೇರಿದಂತೆ ಆರು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ಘೋಷಿಸಲಾಗಿದೆ.
ಕರಾವಳಿ ಭಾಗದಲ್ಲಿ ಗಾಳಿ ಸಮೇತ ಅಲೆಗಳ ಅಬ್ಬರ ಹೆಚ್ಚಾಗಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa