ಚೌಡೇಶ್ವರಿ ದೇವಸ್ಥಾನದ ಅಭಿವೃದ್ಧಿಗೆ 15 ಲಕ್ಷ : ಸಚಿವ ತಿಮ್ಮಾಪುರ ಘೋಷಣೆ
ವಿಜಯಪುರ, 28 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮರಿಕಟ್ಟಿ ಗ್ರಾಮದಲ್ಲಿ ಇಂದು ನಡೆದ ಕಿತ್ತೂರ ರಾಣಿ ಚೆನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭವನ್ನು ಅಬಕಾರಿ ಸಚಿವ ಹಾಗೂ ಬಾಗಲಕೋಟ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ
ಸಚಿವ


ವಿಜಯಪುರ, 28 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮರಿಕಟ್ಟಿ ಗ್ರಾಮದಲ್ಲಿ ಇಂದು ನಡೆದ ಕಿತ್ತೂರ ರಾಣಿ ಚೆನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭವನ್ನು ಅಬಕಾರಿ ಸಚಿವ ಹಾಗೂ ಬಾಗಲಕೋಟ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಚೌಡೇಶ್ವರಿ ದೇವಸ್ಥಾನದ ಅಭಿವೃದ್ಧಿಗೆ 15 ಲಕ್ಷ ರೂಪಾಯಿಗಳ ಘೋಷಣೆ ಮಾಡಿ, ಗ್ರಾಮೀಣ ಅಭಿವೃದ್ಧಿಯ ಕಡೆಗೆ ಸರ್ಕಾರದ ಬದ್ಧತೆಯನ್ನು ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಅವರು, ಕಿತ್ತೂರ ರಾಣಿ ಚೆನ್ನಮ್ಮ ಅವರು ಬ್ರಿಟಿಷ್ ಸಾಮ್ರಾಜ್ಯವಾದದ ವಿರುದ್ಧ ಹೋರಾಡಿ, ಮಹಿಳಾ ಸಬಲೀಕರಣದ ಮೂಲ ಸಿದ್ಧಾಂತವನ್ನು ತೋರಿದ ನಾಯಕಿ. ಇಂತಹ ಮಹಾನ್ ವ್ಯಕ್ತಿಯ ಮೂರ್ತಿ ಗ್ರಾಮದಲ್ಲಿ ನಿಲ್ಲುವುದು ಯುವ ತಲೆಮಾರುಗಳಿಗೆ ಪ್ರೇರಣೆಯಾಗುತ್ತದೆ. ಇದೇ ರೀತಿ, ಗ್ರಾಮದ ಚೌಡೇಶ್ವರಿ ದೇವಸ್ಥಾನದ ಸುಧಾರಣೆಗೆ 15 ಲಕ್ಷ ರೂಪಾಯಿಗಳನ್ನು ಘೋಷಿಸುತ್ತಿದ್ದೇನೆ. ಇದು ಗ್ರಾಮದ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿಕೊಳ್ಳುವಲ್ಲಿ ಸಹಾಯ ಮಾಡುತ್ತದೆ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಲೋಕಾಪೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕಿವಡಿ (ವಕೀಲರು), ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ್, ಮುಧೋಳ ಎಪಿಎಂಸಿ ಅಧ್ಯಕ್ಷರಾದ ಸಂಗಪ್ಪ ಇಮ್ಮನ್ನವರ, ಬಸನಗೌಡ, ಮಲ್ಲನಗೌಡ, ರಮೇಶ ಜೀರಗಾಳ, ಶೇಖರ ಸೂರಮಂಜಿ ಸೇರಿದಂತೆ ಹಲವಾರು ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande