
ರಾಯಚೂರು, 28 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಕ್ಕಳು ಮತ್ತು ಯುವ ಜನರ ಕಲಾಪ್ರತಿಭೆ, ಕಲಾ ನೈಪುಣ್ಯ ಪ್ರೋತ್ಸಾಹಿಸಲು ಕಲಾ ಪ್ರತಿಭೋತ್ಸವ ರೂಪಿಸಿದೆ. ಈ ಕಾರ್ಯಕ್ರಮವನ್ನು ನಗರದ ಕನ್ನಡ ಭವನದಲ್ಲಿನಡೆಸಲಾಗುವುದು. ಬಾಲ ಪ್ರತಿಭೆ, ಕಿಶೋರ ಪ್ರತಿಭೆ, ಯುವ ಪ್ರತಿಭೆ ಶೀರ್ಷಿಕೆಯಡಿ 3 ವಿಭಾಗಗಳಲ್ಲಿ ಸ್ಪರ್ಧಾ ರೂಪದಲ್ಲಿ ಕಲಾ ಪ್ರತಿಭೋತ್ಸವ ನಡೆಯಲಿದ್ದು, ಆಸಕ್ತರು ಹೆಸರು ನೋಂದಣೆ ಮಾಡಿಕೊಳ್ಳಬಹುದಾಗಿದೆ.
ಬಾಲ ಪ್ರತಿಭೆ: ಬಾಲ ಪ್ರತಿಭೆ ವಿಭಾಗದಲ್ಲಿಭಾಗವಹಿಸುವ ಅಭ್ಯರ್ಥಿಗಳಿಗೆ ಕನಿಷ್ಠ 8ರಿಂದ 14 ವರ್ಷ ವಯಸ್ಸಾಗಿರಬೇಕು.
ಕಿಶೋರ ಪ್ರತಿಭೆ: ಕಿಶೋರ ಪ್ರತಿಭೆ ವಿಭಾಗದಲ್ಲಿಭಾಗವಹಿಸುವ ಅಭ್ಯರ್ಥಿಗಳಿಗೆ ಕನಿಷ್ಠ 14ರಿಂದ 18 ವರ್ಷ ವಯಸ್ಸಾಗಿರಬೇಕು.
ಯುವ ಪ್ರತಿಭೆ: ಯುವ ಪ್ರತಿಭೆ ವಿಭಾಗದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18-30 ವರ್ಷ ವಯಸ್ಸಾಗಿರಬೇಕು. ಜಿಲ್ಲಾ ಮಟ್ಟದಲ್ಲಿ ಭಾಗವಹಿಸುವ ಎಲ್ಲಾ ಸ್ಪರ್ಧಿಗಳಿಗೆ ಇಲಾಖೆಯಿಂದ ಪ್ರಮಾಣಪತ್ರ ನೀಡಲಾಗುವುದು.
ಈ ಸ್ಪರ್ಧೆಗಳಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಹೆಸರನ್ನು ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ನವಂಬರ್ 5ರೊಳಗಾಗಿ ಸ್ವ-ವಿವರವನ್ನು ಸಲ್ಲಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉತ್ತರಾದೇವಿ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್