ಅಕ್ಟೋಬರ್ 31ರಂದು ಪಾಲಿಕೆಯಿಂದ ಬೀದಿ ಬದಿ ವ್ಯಾಪಾರಿಗಳಿಂದ ಸಭೆ
ರಾಯಚೂರು, 28 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ರಾಯಚೂರು ಮಹಾನಗರ ಪಾಲಿಕೆಯಿಂದ ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ (ಪಿಎಂ ಸ್ವ-ನಿಧಿ) ಯೋಜನೆಯಡಿ ಆರ್ಥಿಕ ಸೇರ್ಪಡೆಯನ್ನು ಹೆಚ್ಚಿಸುವುದು, ಡಿಜಿಟಲ್ ವಹಿವಾಟು ನಡೆಸಲು ಉತ್ತೇಜಿಸುವುದು, ಸಾಮಥ್ರ್ಯ ಅಭಿವೃದ್ಧಿಯನ್ನು ವೃದ್ಧಿಸುವುದು
ಅಕ್ಟೋಬರ್ 31ರಂದು ಪಾಲಿಕೆಯಿಂದ ಬೀದಿ ಬದಿ ವ್ಯಾಪಾರಿಗಳಿಂದ ಸಭೆ


ರಾಯಚೂರು, 28 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ರಾಯಚೂರು ಮಹಾನಗರ ಪಾಲಿಕೆಯಿಂದ ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ (ಪಿಎಂ ಸ್ವ-ನಿಧಿ) ಯೋಜನೆಯಡಿ ಆರ್ಥಿಕ ಸೇರ್ಪಡೆಯನ್ನು ಹೆಚ್ಚಿಸುವುದು, ಡಿಜಿಟಲ್ ವಹಿವಾಟು ನಡೆಸಲು ಉತ್ತೇಜಿಸುವುದು, ಸಾಮಥ್ರ್ಯ ಅಭಿವೃದ್ಧಿಯನ್ನು ವೃದ್ಧಿಸುವುದು ಮತ್ತು ಬೀದಿ ಬದಿ ವ್ಯಾಪಾರಿಗಳು ಮತ್ತು ಅವರ ಕುಟುಂಬದ ಸದಸ್ಯರಿಗೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ಕಲ್ಪಿಸುವುದನ್ನು ಖಚಿತಪಡಿಸಿಕೊಳ್ಳುವ ಮೂಲಕ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಕ್ಟೋಬರ್ 31ರ ಸಂಜೆ 4ಗಂಟೆಗೆ ಪಾಲಿಕೆಯ ಜೋನಲ್-01ರಲ್ಲಿ ಬೀದಿ ಬದಿ ವ್ಯಾಪಾರದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ಮಾಜಿ ಟಿ.ವಿ.ಸಿ ಸದಸ್ಯರು ಹಾಗೂ ಆಸಕ್ತರು ಸಭೆಗೆ ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande