
ನವದೆಹಲಿ, 29 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಭಾರತೀಯ ಜನತಾ ಪಕ್ಷದ ಮುಖ್ಯ ಪ್ರಚಾರಕ ಮತ್ತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ಬಿಹಾರದ ಮೂರು ಸ್ಥಳಗಳಲ್ಲಿ ಸಾರ್ವಜನಿಕ ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಅಭ್ಯರ್ಥಿಗಳ ಗೆಲುವಿಗೆ ಸಾರ್ವಜನಿಕರಲ್ಲಿ ಮನವಿ ಮಾಡಲಿದ್ದಾರೆ.
ಬಿಜೆಪಿಯ 'ಎಕ್ಸ್' ಖಾತೆಯಲ್ಲಿ ಹಂಚಿಕೊಂಡಿರುವ ವೇಳಾಪಟ್ಟಿಯ ಪ್ರಕಾರ, ಅಮಿತ್ ಶಾ ಅವರು ಮಧ್ಯಾಹ್ನ 12.15 ಕ್ಕೆ ದರ್ಭಂಗಾ ಜಿಲ್ಲೆಯ ಅಲಿನಗರದ ಪೊಹಡ್ಡಿ ಬೇಲಾ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ನಂತರ ಸಮಷ್ಟಿಪುರ ಜಿಲ್ಲೆಯ ರೋಸೆರಾದ ಕರ್ಪುರಿ ಕ್ರೀಡಾಂಗಣದಲ್ಲಿ ಮಧ್ಯಾಹ್ನ 1.30 ಕ್ಕೆ ಮತ್ತು ಬೇಗುಸರಾಯ್ ಜಿಲ್ಲೆಯ ಭಗವಾನ್‌ಪುರದಲ್ಲಿ ಮಧ್ಯಾಹ್ನ 3 ಗಂಟೆಗೆ ಎನ್ ಡಿಎ ಅಭ್ಯರ್ಥಿಗಳ ಪ್ರರ ಪ್ರಚಾರ ನಡೆಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa