
ವಿಜಯಪುರ, 29 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ನವೆಂಬರ್ 8ರಂದು ಸಂತ ಶ್ರೇಷ್ಟ ಭಕ್ತ ಕನಕದಾಸ ಜಯಂತಿ ಹಾಗೂ ನವೆಂಬರ್ 11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಬುಧವಾರ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ
ಸಂತ ಶ್ರೇಷ್ಟ ಭಕ್ತ ಕನಕದಾಸ ಹಾಗೂ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ನಿರ್ಣಯಿಸಲಾಯಿತು.
ನವೆಂಬರ್ 8ರಂದು ಕನಕದಾಸ ಜಯಂತಿ ಅಂಗವಾಗಿ ಬೆಳಿಗ್ಗೆ 9.30ಕ್ಕೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ವಿವಿಧ ಕಲಾತಂಡಗಳೊಂದಿಗೆ ಕನಕದಾಸ ಅವರ ಭಾವಚಿತ್ರದ ಮೆರವಣಿಗೆ ಚಾಲನೆ ನೀಡಲಾಗುವುದು. ಮೆರವಣಿಗೆಯೂ ನಗರದ ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಡಾ.ಬಿ.ಆರ್. ಅಂಬೇಡ್ಕರ ವೃತ್ತ, ಕನಕದಾಸ ವೃತ್ತದ ಮಾರ್ಗವಾಗಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರಕ್ಕೆ ಆಗಮಿಸಿ, ಬೆಳಿಗ್ಗೆ 10.30ಕ್ಕೆ ರಂಗಮಂದಿರದಲ್ಲಿ ಜಯಂತಿ ವೇದಿಕೆ ಕಾರ್ಯಕ್ರಮ ಜರುಗಲಿದೆ.
ನವೆಂಬರ್ 11ರಂದು ವೀರವನಿತೆ ಒನಕೆ ಓಬವ್ವ ಜಯಂತಿ ಅಂಗವಾಗಿ ಬೆಳಿಗ್ಗೆ 9.30ಕ್ಕೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ವಿವಿಧ ಕಲಾತಂಡಗಳೊಂದಿಗೆ ಒನಕೆ ಓಬವ್ವ ಅವರ ಭಾವಚಿತ್ರದ ಮೆರವಣಿಗೆ ಹಮ್ಮಿಕೊಳ್ಳಲಾಗುವುದು. ಬೆಳಿಗ್ಗೆ 10.30ಕ್ಕೆ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದೆ.
ವೇದಿಕೆ ಕಾರ್ಯಕ್ರಮದಲ್ಲಿ ನಾಡಗೀತೆ, ಉಪನ್ಯಾಸ, ಸುಗಮ ಸಂಗೀತ,ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಣಯಿಸಲಾಯಿತು. ಅಂದು ನಗರದ ವಿವಿಧ ವೃತ್ತಗಳಿಗೆ ದೀಪಾಲಂಕಾರಗೊಳಿಸುವಂತೆ ಮಹಾನಗರಪಾಲಿಕೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಣ ಹಾಗೂ ವಿತರಣೆ,ವೇದಿಕೆ ಸಿದ್ಧತೆ,ವೇದಿಕೆ ಅಲಂಕಾರ,ಕುಡಿಯುವ ನೀರಿನ ವ್ಯವಸ್ಥೆ ಕೈಗೊಂಡು ಜಯಂತಿ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿಸುವಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸಂಬಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ಸಿಬಿ ಕುಂಬಾರ, ಮಹಾನಗರ ಪಾಲಿಕೆ ಉಪ ಆಯುಕ್ತರಾದ ಮಹಾವೀರ ಬೋರಣ್ಣವರ,ಕ್ರೀಡಾಧಿಕಾರಿ ರಾಜಶೇಖರ್ ಧೈವಾಡಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ವಿವಿಧ ಸಮಾಜದ ಮುಖಂಡರುಗಳಾದ ಮಲ್ಲಣ್ಣ ಶಿರಶ್ಯಾಡ,ದೇವಕಾಂತ ಬಿಜ್ಜರಗಿ, ವೈ ಎಚ್ ವಿಜಯಕರ, ಎ.ಎಚ್.ಕೊಳಮಲಿ,ಅಡಿವೆಪ್ಪ ಸಾಲಗಲ್,ಸದಾಶಿವ ಪೂಜಾರಿ,ಅಮೋಘಸಿದ್ಧ ಪೂಜಾರಿ, ಚಂದ್ರಶೇಖರ್ ತೋಳಮಟ್ಟಿ,ಭೀರಪ್ಪ ಜುಮನಾಳ,ದೇವೆಂದ್ರ ಮೇರೆಕರ್, ಭೀಮರಾಯ ಜಿಗಜಿಣಗಿ ಸೇರಿದಂತೆ ಇಲಾಖೆ ಅಧಿಕಾರಿಗಳು,ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande