ಅ.೩೦,೩೧ ರಂದು ಗುಜರಾತ್ ಗೆ ಪ್ರಧಾನಿ ಮೋದಿ ಭೇಟಿ
ನವದೆಹಲಿ, 29 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 30 ಮತ್ತು 31ರಂದು ಗುಜರಾತ್ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಅವರು ರಾಷ್ಟ್ರೀಯ ಏಕತಾ ದಿನಾಚರಣೆಯಲ್ಲಿ ಭಾಗವಹಿಸಿ, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ 150 ರೂ. ಸ್ಮ
Pm


ನವದೆಹಲಿ, 29 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 30 ಮತ್ತು 31ರಂದು ಗುಜರಾತ್ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಅವರು ರಾಷ್ಟ್ರೀಯ ಏಕತಾ ದಿನಾಚರಣೆಯಲ್ಲಿ ಭಾಗವಹಿಸಿ, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ 150 ರೂ. ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಿದ್ದಾರೆ.

ಅಕ್ಟೋಬರ್ 30ರಂದು ಕೆವಾಡಿಯಾದ ಏಕ್ತಾ ನಗರದಲ್ಲಿ ₹1,140 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಅವರು ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಗಳಲ್ಲಿ ಇ-ಬಸ್ ಚಾರ್ಜಿಂಗ್ ಡಿಪೋ, ಎಲೆಕ್ಟ್ರಿಕ್ ಬಸ್‌ಗಳು, ಬಿರ್ಸಾ ಮುಂಡಾ ಬುಡಕಟ್ಟು ವಿಶ್ವವಿದ್ಯಾಲಯ, ಕ್ರೀಡಾ ಸಂಕೀರ್ಣ ಮತ್ತು ವೀರ್ ಬಾಲಕ್ ಉದ್ಯಾನ್ ಪ್ರಮುಖವಾಗಿವೆ.

ಅಕ್ಟೋಬರ್ 31ರಂದು ಪ್ರಧಾನಿ ಸರ್ದಾರ್ ಪಟೇಲ್ ಅವರ ಏಕತಾ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿ, ಏಕತಾ ದಿನದ ಮೆರವಣಿಗೆಯನ್ನು ಪರಿಶೀಲಿಸಲಿದ್ದಾರೆ. ಈ ಮೆರವಣಿಗೆಯಲ್ಲಿ ದೇಶದ ಹಲವು ರಾಜ್ಯಗಳ ಸಾಂಸ್ಕೃತಿಕ ವೈವಿಧ್ಯತೆಯನ್ನು ಪ್ರತಿಬಿಂಬಿಸುವ 10 ಟ್ಯಾಬ್ಲೋಗಳು ಹಾಗೂ 900 ಕಲಾವಿದರು ಭಾಗವಹಿಸಲಿದ್ದಾರೆ.

ನಂತರ “ಆರಂಭ್ 7.0” ಕಾರ್ಯಕ್ರಮದ ಸಮಾರೋಪದಲ್ಲಿ ಪ್ರಧಾನಿ 100ನೇ ಫೌಂಡೇಶನ್ ಕೋರ್ಸ್‌ನ 660 ಅಧಿಕಾರಿ ತರಬೇತಿದಾರರೊಂದಿಗೆ ಸಂವಾದ ನಡೆಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande