ಸೊಳ್ಳೆ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಿ : ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು
ಬಳ್ಳಾರಿ, 03 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ನೀರು ನಿಲ್ಲುವುದನ್ನು ತಪ್ಪಿಸಿ, ಡೆಂಗ್ಯು ಹರಡುವ ಈಡಿಸ್ ಇಜಿಪ್ಟೆ ಸೊಳ್ಳೆಯ ಸಂತತಿಯನ್ನು ನಾಶ ಮಾಡುವ ಮೂಲಕ ಸೊಳ್ಳೆ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕ
ಸೊಳ್ಳೆ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಕೈ ಜೋಡಿಸಿ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾ


ಬಳ್ಳಾರಿ, 03 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ನೀರು ನಿಲ್ಲುವುದನ್ನು ತಪ್ಪಿಸಿ, ಡೆಂಗ್ಯು ಹರಡುವ ಈಡಿಸ್ ಇಜಿಪ್ಟೆ ಸೊಳ್ಳೆಯ ಸಂತತಿಯನ್ನು ನಾಶ ಮಾಡುವ ಮೂಲಕ ಸೊಳ್ಳೆ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ತಿಳಿಸಿದ್ದಾರೆ.

ನಿಂತ ನೀರಿನಿಂದ ಸೊಳ್ಳೆ ಉತ್ಪತ್ತಿಯಾಗುವ ಜೊತೆಗೆ ಮಕ್ಕಳಿಗೆ ಡೆಂಗ್ಯೂ ಸೇರಿದಂತೆ ಸೊಳ್ಳೆಯ ಕಚ್ಚುವಿಕೆಯಿಂದ ಹರಡುವ ಚಿಕುನ್‌ಗುನ್ಯಾ, ಮಲೇರಿಯಾ, ಆನೇಕಾಲು ರೋಗ, ಮೆದುಳು ಜ್ವರ ಮುಂತಾದವುಗಳು ಕಂಡುಬರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಡೆಂಗ್ಯು ಜ್ವರವಾಗಿದ್ದರೆ ರೋಗಿಯ ಪ್ಲೇಟ್‌ಲೆಟ್ಸ್ಗಳ ಶೀಘ್ರ ಕುಸಿಯುವಿಕೆಯಿಂದ ಆರೋಗ್ಯ ಸಮಸ್ಯೆ ಎದುರಾಗಿ ರಕ್ತಸ್ರಾವದಂತಹ ಗಂಭಿರ ಸಮಸ್ಯೆ ಉಂಟಾಗಬಹುದು. ಯಾರಿಗಾದರೂ ಮೂರು ದಿನಗಳಿಗಿಂತ ಕಡಿಮೆಯಾಗದ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ನೋವು, ಮಾಂಸಖ0ಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಂಡಲ್ಲಿ ನಿರ್ಲಕ್ಷಿಸದೇ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಗತ್ಯ ಪರೀಕ್ಷೆ ಮಾಡಿಸಿ ವೈದ್ಯರ ಸಲಹೆಯಂತೆ ಲಕ್ಷಣಗಳ ಆಧಾರದ ಮೇರೆಗೆ ಚಿಕಿತ್ಸೆ ಪಡೆಯಬೇಕು ಎಂದಿದ್ದಾರೆ.

*ಮು0ಜಾಗ್ರತೆ ಕ್ರಮ:*

ಡ್ರಮ್, ಬ್ಯಾರಲ್, ನೀರಿನ ತೊಟ್ಟಿ, ಕಲ್ಲಿನ ಡೋಣಿ, ಹೂವಿನ ಕುಂಡಲ ಮುಂತಾದ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ ಹಾಗೂ ಮುಚ್ಚಳ ಮುಚ್ಚಿ ಬಟ್ಟೆ ಕಟ್ಟಿ ಬಳಕೆ ಮಾಡದ ನೀರು ಸಂಗ್ರಹಕಗಳಿಗೆ ಕೊಬ್ಬರಿ ಎಣ್ಣೆಯನ್ನು ಹಾಕುವ ಮೂಲಕ ಸೊಳ್ಳೆ ಉತ್ಪತ್ತಿ ತಡೆಯಬಹುದು.

ಹಳೆಯ ಡಬ್ಬಿ, ಟ್ಯೂಬ್, ಒಡೆದ ಬಕೆಟ್, ಕುಡಿಯುವ ಪಾನೀಯದ ಬಾಟಲ್, ಕಸ, ಪುಡಿಯನ್ನು ಸರಿಯಾಗಿ ವಿಲೇವಾರಿ ಮಾಡಿ ಹೂದಾನಿ ಅಥವಾ ಕಪ್‌ಗಳಲ್ಲಿ ನೀರನ್ನು ದಿನವೂ ಬದಲಾಯಿಸಬೇಕು.

ಟ್ಯಾಂಕ್, ಬಕೆಟ್‌ಗಳು ಮುಚ್ಚಿ, ಕೂಲರ್, ಫ್ರಿಜ್ ಹಿಂಬದಿ ಭಾಗದ ಟ್ರೇಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಪೂರ್ಣಬಾಹು ಬಟ್ಟೆಗಳನ್ನು ಧರಿಸಿ ಕಿಟಕಿ-ಬಾಗಿಲುಗಳಿಗೆ ಕಿಡೆ ಜಾಲಿ ಅಳವಡಿಸಿ ಡೆಂಗ್ಯೂ ಜ್ವರ ಹರಡದಂತೆ ಎಚ್ಚರವಹಿಸಬೇಕು ಎಂದು ಡಿಹೆಚ್‌ಓ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande