ಬೆಳಗಾವಿ, 03 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆ ಕಳೆದುಕೊಳ್ಳುವುದು ನೂರಕ್ಕೆ ನೂರರಷ್ಟು ನಿಜ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ನವೆಂಬರ್-ಡಿಸೆಂಬರ್ ಕ್ರಾಂತಿ ಖಚಿತ ಎಂದಿದ್ದಾರೆ.
ಬೆಳೆ ಹಾನಿ ಸಮೀಕ್ಷೆಗೆ ಬೆಳಗಾವಿ ಜಿಲ್ಲೆಯ ಪ್ರವಾಸದಲ್ಲಿರುವ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ಅಧಿಕಾರ ಹಂಚಿಕೆ ಸಂಬಂಧ ಕಾಂಗ್ರೆಸ್‌ನಲ್ಲಿ ಒಪ್ಪಂದ ಆಗಿರುವುದು ನಿಜ. ಈಗ ಜಗಳ ಪ್ರಾರಂಭವಾಗಿದೆ, ಕ್ರಾಂತಿ ಹೇಳಿಕೆ ನೀಡಿ ರಾಜಣ್ಣ ಅಧಿಕಾರ ಕಳೆದುಕೊಂಡಿದ್ದಾರೆ ಎಂದಿದ್ದಾರೆ.
ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಡುವುದಿಲ್ಲ. ಡಿ.ಕೆ.ಶಿವಕುಮಾರ್ ಹಠ ಬಿಡುತ್ತಿಲ್ಲ. ಕಾಂಗ್ರೆಸ್ ಒಳ ಜಗಳದಲ್ಲಿ ಸರ್ಕಾರ ಪತನವಾದರೆ ಬಿಜೆಪಿ ಸರಕಾರ ರಚನೆ ಮಾಡುವುದಿಲ್ಲ ನಾವು ಚುನಾವಣೆಗೆ ಹೋಗಲು ಸಿದ್ದರಿದ್ದೇವೆ ಎಂದರು.
ಸಿದ್ದರಾಮಯ್ಯ ತಂಡಕ್ಕೆ ಜಾತಿ ಸಮೀಕ್ಷೆ ಮಾತ್ರ ಮುಖ್ಯವಾಗಿದೆ. ಜಾತಿಗಳ ಮಧ್ಯೆ ಬೆಂಕಿ ಹಚ್ಚುವುದೇ ಸಿದ್ದರಾಮಯ್ಯನವರ ಕಾಯಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಳೆ ಹಾನಿಯಿಂದ ದಸರಾ ಹಬ್ಬ ಮನೆಯಲ್ಲಿ ಆಚರಣೆ ಮಾಡಲು ಆಗದೇ ಬೀದಿಯಲ್ಲಿ ಸಂತ್ರಸ್ತರು ನಿಂತಿದ್ದಾರೆ. ಆದರೂ ರಾಜ್ಯ ಸರ್ಕಾರ ಕುಂಭಕರ್ಣ ನಿದ್ದೆಯಲ್ಲಿದೆ. ಇದು ದುಷ್ಟ ಸರ್ಕಾರ ಎಂದ ಆರ್.ಅಶೋಕ್, ಕೇಂದ್ರ ಸರ್ಕಾರ ನೆರವಿಗೆ ಬರಬೇಕೆನ್ನುವ ಹೇಳಿಕೆ ಮುಖ್ಯಮಂತ್ರಿ ನೀಡುತ್ತಿದ್ದಾರೆ. ಮಳೆಯಿಂದ ಎಷ್ಟು ಹಾನಿಯಾಗಿದೆ ಎಂಬ ವರದಿಯನ್ನು ಕೇಂದ್ರಕ್ಕೆ ಕಳುಹಿಸಬೇಕು ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa