ಚಾಮರಾಜನಗರ, 03 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಹುಲಿಯ ದಾರುಣ ಸಾವು ಬೆಳಕಿಗೆ ಬಂದಿದೆ. ಹನೂರು ವಲಯದ ಪಚ್ಚೆದೊಡ್ಡಿ ಗ್ರಾಮದ ಬಳಿ ಹುಲಿಯ ಅರ್ಧ ದೇಹ ಪತ್ತೆಯಾಗಿದೆ.
ಹುಲಿಯ ಕಳ್ಳಬೇಟೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಲಿಯ ಉಳಿದ ದೇಹದ ಭಾಗ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ.
ಹುಲಿ ಸಾವಿಗೆ ನಿಖರ ಕಾರಣವೇನು ಮತ್ತು ಇದರ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ,ಎಂದು ಮಹದೇಶ್ವರ ವನ್ಯಧಾಮದ ಡಿಸಿಎಫ್ ಭಾಸ್ಕರ್ ತಿಳಿಸಿದ್ದಾರೆ.
ಇದೇ ವೇಳೆ ಘಟನೆ ಕುರಿತು ಸಂಪೂರ್ಣ ತನಿಖೆ ನಡೆಸುವಂತೆ ಅರಣ್ಯ ಮತ್ತು ವನ್ಯಜೀವಿ ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಆದೇಶಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa