ಪೂರ್ಣಿಯಾ, 03 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬಿಹಾರದ ಪೂರ್ಣಿಯಾ ಜಿಲ್ಲೆಯ ಕಸ್ಬಾ ಪೊಲೀಸ್ ಠಾಣೆ ವ್ಯಾಪ್ತಿಯ ಕತಿಹಾರ್–ಜೋಗ್ಬಾನಿ ರೈಲು ಮಾರ್ಗದಲ್ಲಿ ಭೀಕರ ಅಪಘಾತ ಸಂಭವಿಸಿದೆ. ದಸರಾ ಉತ್ಸವದಿಂದ ಹಿಂತಿರುಗುತ್ತಿದ್ದ ಜನರಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಂದು ಮಗು ಗಂಭೀರವಾಗಿ ಗಾಯಗೊಂಡಿದೆ. ಗಾಯಾಳುವನ್ನು ಪೂರ್ಣಿಯಾದ ಜಿಎಂಸಿಎಚ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ಮಖಾನಾ ನಿವಾಸಿಗಳಾಗಿದ್ದು, ಜವಾನ್‌ಪುರ ಬಳಿ ಜೋಗ್ಬಾನಿಯಿಂದ ದಾನಾಪುರಕ್ಕೆ ತೆರಳುತ್ತಿದ್ದ ವಂದೇ ಭಾರತ್ ರೈಲು ಈ ದುರ್ಘಟನೆಗೆ ಕಾರಣ ಎಂದು ತಿಳಿದು ಬಂದಿದೆ.
ಪೊಲೀಸರು ಮತ್ತು ಆರ್‌ಪಿಎಫ್ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಆಗಮಿಸಿ, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa