ಚಿತ್ರಕಲಾ ಸ್ಪರ್ಧೆಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಚಾಲನೆ
ವಿಜಯಪುರ, 30 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರವಾಸೋದ್ಯಮ ಇಲಾಖೆ, ಪುರಾತತ್ವ ಇಲಾಖೆ ಇವರ ಸಹಯೋಗದೊಂದಿಗೆ ಬುಧವಾರ ನಗರದ ಗಗನ್ ಮಹಲ್ ಆವರಣದ
ಡಿಸಿ


ವಿಜಯಪುರ, 30 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರವಾಸೋದ್ಯಮ ಇಲಾಖೆ, ಪುರಾತತ್ವ ಇಲಾಖೆ ಇವರ ಸಹಯೋಗದೊಂದಿಗೆ ಬುಧವಾರ ನಗರದ ಗಗನ್ ಮಹಲ್ ಆವರಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಚಿತ್ರ ಬಿಡಿಸುವ ಮೂಲಕ ಚಾಲನೆ ನೀಡಿ ಗಮನ ಸೆಳೆದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಓದಿನೊಂದಿಗೆ ಸೃಜನಾತ್ಮಕ ಕಲೆಯನ್ನು ರೂಢಿಸಿಕೊಳ್ಳುವ ಮೂಲಕ, ಸಂಗೀತ, ಚಿತ್ರಕಲೆ, ಕ್ರೀಡಾ ಕ್ಷೇತ್ರ ಸೇರಿದಂತೆ ಆಟೋಟಗಳಲ್ಲಿ ತಮ್ಮ ವ್ಯಕ್ತಿತ್ವವನ್ನು ವಿಕಸನಗೊಳಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿತ ನುಡಿಗಳನ್ನಾಡಿದರು.

ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಶಾಲೆಗಳಿಂದ ಒಟ್ಟು 568 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಪೈಕಿ ಪ್ರಾಥಮಿಕ ಹಂತದಲ್ಲಿ ಎಂಪಿಎಸ್ ಗಣಿಹಾರ ಶಾಲೆಯ ಸಮೀನಾ ಶೇಖ ಪ್ರಥಮ, ವಿಜಯಪುರದ ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಶಾಲೆಯ ಪ್ರಜ್ಞಾ ಪಿ.ಶಿಂಧೆ ದ್ವೀತಿಯ ಹಾಗೂ ಇಟ್ಟಂಗಿಹಾಳದ ಎಕ್ಸಲೆಂಟ್ ಪ್ರಾಥಮಿಕ ಶಾಲೆಯ ಐಶ್ವರ್ಯ ಡೋಣಗಿ ತೃತೀಯ ಸ್ಥಾನ ಪಡೆದುಕೊಂಡರು.

ಪ್ರೌಢಶಾಲಾ ವಿಭಾಗದಲ್ಲಿ ನಗರದ ಪ್ರೇರಣಾ ಪಬ್ಲಿಕ್ ಶಾಲೆಯ ಅಪೂರ್ವ ಪಿ.ಲಮಾಣಿ ಪ್ರಥಮ, ಬಿ.ಎಂ.ಪಾಟೀಲ ಪಬ್ಲಿಕ್ ಶಾಲೆಯ ವೈಷ್ಣವಿ ಆರ್.ಪಾಟೀಲ ದ್ವೀತಿಯ, ನಗರದ ಸೆಂಟ್ ಜೋಷೆಫ್ ಆಂಗ್ಲ ಮಾಧ್ಯಮ ಶಾಲೆಯ ವಿಜಯಲಕ್ಷ್ಮಿ ಕೊಕಟನೂರ ತೃತೀತಯ ಸ್ಥಾನ ಪಡೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ವಿವೇಕ ಗುಣಗಾ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಅರವಿಂದ ಹೂಗಾರ, ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಸಹಾಯಕ ಸಂರಕ್ಷಣಾಧಿಕಾರಿ ವಿಜಯಕುಮಾರ, ವಿವಿಧ ಶಾಲೆಗಳ ಚಿತ್ರಕಲಾ ಶಿಕ್ಷಕರು-ಶಿಕ್ಷಕಿಯರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande