ನೇಣು ಹಾಕಿಕೊಂಡು ಬಾಲಕ ಆತ್ಮಹತ್ಯೆ
ವಿಜಯಪುರ, 31 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬಾಲಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಪುನರ್ವಸತಿ ಕೇಂದ್ರದಲ್ಲಿ ಘಟನೆ ನಡೆದಿದೆ. ಆಕಾಶ್ ಹೆದ್ದಾರಿ (15) ಮೃತಪಟ್ಟ ದುರ್ದೈವಿ. ಮೃತ ಆಕಾಶ್ ಜಮಖಂಡಿಯ ಡಿಸ್ಟಿಕ್ ಬಂಜಾರ ಎಜುಕೇಶನ್
ಆತ್ಮಹತ್ಯೆ


ವಿಜಯಪುರ, 31 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬಾಲಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಪುನರ್ವಸತಿ ಕೇಂದ್ರದಲ್ಲಿ ಘಟನೆ ನಡೆದಿದೆ. ಆಕಾಶ್ ಹೆದ್ದಾರಿ (15) ಮೃತಪಟ್ಟ ದುರ್ದೈವಿ.

ಮೃತ ಆಕಾಶ್ ಜಮಖಂಡಿಯ ಡಿಸ್ಟಿಕ್ ಬಂಜಾರ ಎಜುಕೇಶನ್ ಸೋಸೈಟಿ ಹೈಸ್ಕೂಲ್‌ನಲ್ಲಿ ಒಂಬತ್ತನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಇಂದು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಘಟನೆಯ ಮಾಹಿತಿ ದೊರಕಿದ ಕೂಡಲೇ ಜಮಖಂಡಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನೈಜ ಕಾರಣ ತಿಳಿಯಲು ಜಮಖಂಡಿ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande