ನವದೆಹಲಿ, 06 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬಿಹಾರ ವಿಧಾನ ಸಭಾ ಚುನಾವಣೆಯ ಕುರಿತಂತೆ ಭಾರತೀಯ ಚುನಾವಣಾ ಆಯೋಗ ಸಂಜೆ ಸುದ್ದಿಗೋಷ್ಠಿ ನಡೆಸಲಿದ್ದು
ದಿನಾಂಕವನ್ನು ಪ್ರಕಟಿಸಲಿದೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಈ ಹಿಂದೆ ಬಿಹಾರದ 243 ಸ್ಥಾನಗಳಿಗೆ ಚುನಾವಣೆಯನ್ನು ನವೆಂಬರ್ 22ರ ಮೊದಲು ಮತ್ತು ಪ್ರಸ್ತುತ ವಿಧಾನಸಭೆಯ ಅವಧಿ ಮುಗಿಯುವ ಮೊದಲು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದರು.
ರಾಜಕೀಯ ಪಕ್ಷಗಳು ಅಕ್ಟೋಬರ್ ಅಂತ್ಯದಲ್ಲಿ ಆಚರಿಸಲಾಗುವ ‘ಛಠ್ ಪೂಜೆ’ ಹಬ್ಬದ ನಂತರ ಚುನಾವಣೆಯನ್ನು ನಡೆಸುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿವೆ.
ಇತರ ರಾಜ್ಯಗಳಲ್ಲಿ ಉದ್ಯೋಗದಲ್ಲಿರುವ ಹೆಚ್ಚಿನ ಸಂಖ್ಯೆಯ ಜನರು ಹಬ್ಬಕ್ಕಾಗಿ ಊರಿಗೆ ಮರಳುತ್ತಾರೆ. ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಯವ ಸಾಧ್ಯತೆ ಇರುವುದರಿಂದ ಈ ಅವಧಿಯಲ್ಲೇ ಚುನಾವಣೆ ನಡೆಸಬೇಕೆಂದು ಅಯೋಗಕ್ಕೆ ಮನವಿ ಮಾಡಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa