ಜೈಪುರ ಆಸ್ಪತ್ರೆ ದುರಂತ ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಪ್ರಿಯಾಂಕಾ ಗಾಂಧಿ ಆಗ್ರಹ
ನವದೆಹಲಿ, 06 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಜೈಪುರದ ಸವಾಯಿ ಮಾನ್ಸಿಂಗ್ ಆಸ್ಪತ್ರೆಯ ಟ್ರಾಮಾ ಸೆಂಟರ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಎಂಟು ರೋಗಿಗಳು ಪ್ರಾಣ ಕಳೆದುಕೊಂಡ ಘಟನೆ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅವರು ಸಾಮಾಜಿಕ
Priyanka


ನವದೆಹಲಿ, 06 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಜೈಪುರದ ಸವಾಯಿ ಮಾನ್ಸಿಂಗ್ ಆಸ್ಪತ್ರೆಯ ಟ್ರಾಮಾ ಸೆಂಟರ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಎಂಟು ರೋಗಿಗಳು ಪ್ರಾಣ ಕಳೆದುಕೊಂಡ ಘಟನೆ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಅವರು ಸಾಮಾಜಿಕ ಮಾಧ್ಯಮದ ಮೂಲಕ ಪ್ರತಿಕ್ರಿಯೆ ನೀಡಿದ್ದು, ಈ ಘಟನೆ ಅತ್ಯಂತ ಹೃದಯವಿದ್ರಾವಕ ಮೃತರ ಆತ್ಮಗಳಿಗೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ರಾಜ್ಯ ಸರ್ಕಾರವು ಸಂತ್ರಸ್ತ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡಬೇಕು ಮತ್ತು ಈ ದುರಂತದ ಹಿನ್ನೆಲೆಯನ್ನ ತಿಳಿಯಲು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ.

ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಅತ್ಯವಶ್ಯಕ ಎಂದು ಒತ್ತಾಯಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande