ಬಳ್ಳಾರಿ : ಅ.10 ರಂದು ಬೃಹತ್ ‘ಪರಿಸರ ಜಾಗೃತಿ’ ಜಾಥಾ
ಬಳ್ಳಾರಿ, 06 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಸುವರ್ಣ ಮಹೋತ್ಸವದ ಅಂಗವಾಗಿ ಜಿಲ್ಲಾ ಕೇಂದ್ರದಲ್ಲಿ ಅಕ್ಟೋಬರ್ 10 ಬೃಹತ್ ‘ಪರಿಸರ ಜಾಗೃತಿ’ ಜಾಥಾವನ್ನು ಏರ್ಪಡಿಸಲಾಗಿದೆ. ಅಂದು ಬೆಳಿಗ್ಗೆ 09.3
ಬಳ್ಳಾರಿ : ಅ.10 ರಂದು ಬೃಹತ್ ‘ಪರಿಸರ ಜಾಗೃತಿ’ ಜಾಥಾ


ಬಳ್ಳಾರಿ, 06 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಸುವರ್ಣ ಮಹೋತ್ಸವದ ಅಂಗವಾಗಿ ಜಿಲ್ಲಾ ಕೇಂದ್ರದಲ್ಲಿ ಅಕ್ಟೋಬರ್ 10 ಬೃಹತ್ ‘ಪರಿಸರ ಜಾಗೃತಿ’ ಜಾಥಾವನ್ನು ಏರ್ಪಡಿಸಲಾಗಿದೆ.

ಅಂದು ಬೆಳಿಗ್ಗೆ 09.30 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸರ್ಕಾರಿ (ಮಾಜಿ ಪುರಸಭೆ) ಪದವಿಪೂರ್ವ ಕಾಲೇಜು ಮೈದಾನದಲ್ಲಿ ಏರ್ಪಡಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿ ಟಿ.ಎಂ. ಸಿದ್ದೇಶ್ವರ ಬಾಬು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande