ನಾಳೆ : ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ
ಬಳ್ಳಾರಿ, 06 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ನಗರದ ನಲ್ಲಚೆರವು ಪ್ರದೇಶದ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ಶ್ರೀ ಮಹರ್ಷಿ ವಾ
ಅ.07 : ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ


ಅ.07 : ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ


ಬಳ್ಳಾರಿ, 06 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ನಗರದ ನಲ್ಲಚೆರವು ಪ್ರದೇಶದ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ನಡೆಯಲಿದೆ.

ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಉದ್ಘಾಟಿಸುವರು.

ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಕಂಪ್ಲಿ ಶಾಸಕ ಜೆ.ಎನ್ ಗಣೇಶ್, ಬಳ್ಳಾರಿ ಸಂಸದರಾದ ಈ.ತುಕಾರಾಂ, ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸಂಸದ ಡಾ.ಸೈಯದ್ ನಾಸೀರ್ ಹುಸೇನ್, ವಿಧಾನಪರಿಷತ್ ಶಾಸಕ ಡಾ.ಚಂದ್ರಶೇಖರ್ ಬಿ.ಪಾಟೀಲ, ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ, ಬಳ್ಳಾರಿ ನಗರ ನಾರಾ ಭರತ್ ರೆಡ್ಡಿ, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‍ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಸಮಾಜದ ಹಿರಿಯ ಮುತ್ಸದ್ದಿ ಜಿ.ರುದ್ರಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಹೊಸಪೇಟೆಯ ಶ್ರೀ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ವೀರಭದ್ರಪ್ಪ ತಂಬ್ರಳ್ಳಿ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು.

*ಪುಷ್ಪಾರ್ಚನೆ:*

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 09 ಗಂಟೆಗೆ ನಗರದ ಎಸ್.ಪಿ ವೃತ್ತದ ಬಳಿಯ ಮತ್ತು ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಪುಷ್ಪಾರ್ಚನೆ ಮಾಡಲಾಗುವುದು.

*ಮೆರವಣಿಗೆ:*

ನಂತರ ಬೆಳಿಗ್ಗೆ 10 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸರ್ಕಾರಿ (ಮಾಪು) ಪದವಿಪೂರ್ವ ಕಾಲೇಜು ಮೈದಾನದಿಂದ ಭವ್ಯ ಮೆರವಣಿಗೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಡಾ.ಶೋಭಾರಾಣಿ ವಿ.ಜೆ., ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್.ಮಂಜುನಾಥ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದಿನ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ವಾಲ್ಮೀಕಿ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿರುವರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande