ಬಳ್ಳಾರಿ, 08 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಜಿಲ್ಲೆಯ ಸಾರ್ವಜನಿಕರು ತಮ್ಮ ಮನೆ ಸಮೀಕ್ಷೆಗೆ ಒಳಪಡದೇ ಇದ್ದಲ್ಲಿ ಕಂಟ್ರೋಲ್ ರೂಂ ಸಂಖ್ಯೆ: 8277888866 ಗೆ ಕರೆ ಮಾಡಿ ಮಾಹಿತಿ ನೀಡಿದಲ್ಲಿ ಗಣತಿದಾರರು ಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡುವರು. ಸಾರ್ವಜನಿಕರು ಈ ಸಮೀಕ್ಷಾ ಕಾರ್ಯಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್