ಗಂಗಾವತಿ, 08 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಗಂಗಾವತಿ ನಗರದ ಬಿಜೆಪಿ ಯುವ ಮೊರ್ಚಾ ಅಧ್ಯಕ್ಷ, ಮಾಜಿ ಶಾಸಕ ಪರಣ್ಣ ಮುನವಳ್ಳಿ ಆಪ್ತ, ಜುಲೈ ನಗರ ನಿವಾಸಿ ಜೆ. ವೆಂಕಟೇಶ (34) ಅವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಳ್ಳಾರಿ ಜಿಲ್ಲೆಯ ಕಂಪ್ಲಿಯಲ್ಲಿ ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದಾರೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ.
ಪೊಲೀಸರು ವಶಕ್ಕೆ ಪಡೆದವರು ಧನುಂಜಯ, ಮೈಲಾರಿ ಅಲಿಯಾಸ್ ವಿಜಯ್, ಸಲೀಂ ಮತ್ತು ಭೀಮ ಎಂದು ಪೊಲೀಸರು ತಿಳಿಸಿದ್ದಾರೆ. ವಶಕ್ಕೆ ಪಡೆದ ಆರೋಪಿಗಳ ವಿಚಾರಣೆ ನಡೆದಿದ್ದು, ಕೊಲೆಗೆ ಕಾರಣ ತಿಳಿದುಬಂದಿಲ್ಲ. ಪರಾರಿಯಾಗಿರುವ ಆರೋಪಿ ಸಿಕ್ಕ ನಂತರ ಕೊಲೆಯ ಪ್ರಮುಖ ಕಾರಣ ತಿಳಿಯಲಿದೆ ಎಂದು ಹೇಳಲಾಗಿದೆ.
ದುಷ್ಕರ್ಮಿಗಳು ಮಂಗಳವಾರ ರಾತ್ರಿ - ಬುಧವಾರ ನಸುಕಿನಲ್ಲಿ ಕಾರಿನಲ್ಲಿ ಬಂದು, ಕಾರಿನ ಬಾಗಿಲಿನಿಂದ ಡಿಕ್ಕಿ ಹೊಡೆದು ನೆಲಕ್ಕೆ ಬೀಳಿಸಿ ಕೊಲೆ ಮಾಡಿ ಪರಾರಿಯಾಗಿದ್ದರು. ಆರೋಪಿಗಳು ಕಾರನ್ನು ಮತ್ತು ಕಾರಿನಲ್ಲಿ ಮಾರಕಾಸ್ತ್ರಗಳನ್ನು ಬಿಟ್ಟು ಪರಾರಿಯಾಗಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್