ಅಮರಾವತಿ, 08 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಆಂಧ್ರ ಪ್ರದೇಶದ ಅಂಬೇಡ್ಕರ್ ಕೊನಸೀಮಾ ಜಿಲ್ಲೆಯ ರಾಯವರಂ ಮಂಡಲದಲ್ಲಿ ಭೀಕರ ಪಟಾಕಿ ಸ್ಫೋಟ ಸಂಭವಿಸಿದ್ದು, ಪರಿಣಾಮವಾಗಿ 6 ಜನರು ಸಜೀವ ದಹನವಾಗಿದ್ದಾರೆ.
ರಾಯವರಂ ಲಕ್ಷ್ಮಿ ಗಣಪತಿ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ತಯಾರಿಸುವ ಸಮಯದಲ್ಲಿ ಈ ಅವಘಡ ಸಂಭವಿಸಿದ್ದು, ಘಟನಾ ಸ್ಥಳದಲ್ಲಿ 6 ಕಾರ್ಮಿಕರು ಮೃತಪಟ್ಟಿದ್ದು, 8 ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಘಟನೆಯಾದ ಸ್ಥಳಕ್ಕೆ ತಕ್ಷಣ ಪೊಲೀಸರು ಮತ್ತು ಅಗ್ನಿಶಾಮಕ ದಳವನ್ನು ಕಳುಹಿಸಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಲಾಗಿದೆ. ಮೃತರು ಮತ್ತು ಗಾಯಗೊಂಡವರು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಎಂದು ಜಿಲ್ಲಾ ಡಿಎಸ್ಪಿ ರಾಹುಲ್ ಮೀನಾ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa