ರಾಯಚೂರು, 09 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಜೀಂ ಪ್ರೇಮ್ ಜೀ ಫೌಂಡೇಶನ್ ಆಯ್ಕೆ ಮಾಡಿರುವ ಮದರಸಾಗಳಲ್ಲಿ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯ ಅವಧಿಯನ್ನು ನವಂಬರ್ 13ರವರೆಗೆ ವಿಸ್ತರಿಸಲಾಗಿದೆ.
ಅಲ್ಪಸಂಖ್ಯಾತರ ನಿರ್ದೇಶನಾಲಯದಿಂದ ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೆಂಗಳೂರು ನಗರ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಯ್ದ ಮದರಸಾಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಧಾರ್ಮಿಕ ಶಿಕ್ಷಣದೊಂದಿಗೆ ಎನ್‍ಐಒಎಸ್ ಮುಖಾಂತರ ಔಪಚಾರಿಕ ಶಿಕ್ಷಣವನ್ನು ನೀಡುವುದರ ಮೂಲಕ ಅವರ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಅಜೀಂ ಪ್ರೇಮ್ ಜೀ ಫೌಂಡೇಶನ್ ಅವರ ಸಹಯೋಗದೊಂದಿಗೆ ಔಪಚಾರಿಕ ಶಿಕ್ಷಣ ವಿಷಯಗಳಾದ ಕನ್ನಡ, ಇಂಗ್ಲೀμï, ವಿಜ್ಞಾನ ಮತ್ತು ಗಣಿತ ವಿಷಯಗಳನ್ನು ಬೋಧಿಸಲು ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಜಿಲ್ಲಾ ಹಂತದಲ್ಲಿ ಆಯ್ಕೆ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ.
ಅರ್ಹತೆ: ಅಭ್ಯರ್ಥಿಗಳು, ಡಿಇಡಿ ಅಥವಾ ಬಿಇಡಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಉರ್ದು ಭಾಷೆಯಲ್ಲಿ ಕುಶಲತೆಯನ್ನು ಹೊಂದಿರಬೇಕು. ಟಿಇಟಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‍ಸೈಟ್ ವಿಳಾಸ: tttps://dom.karnataka.gov.in. ಇಲ್ಲಿ ಲಭ್ಯವಿರುವ ಅರ್ಜಿ ನಮೂನೆಯನ್ನು ಪಡೆದು ಹಾಗೂ https://docs.google.com/forms/d/1xIEm6-RFzb6-2DaMhr-FITR8LScGU0iuwplQElElErI/editF ಲಿಂಕ್ ನ ಮೂಲಕ ಮಾರ್ಗಸೂಚಿಗಳನ್ವಯ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್