ಕೋರ್ಟ್ ಕಟ್ಟಡದಿಂದ ಹಾರಿ ಪೋಕ್ಸೋ ಆರೋಪಿ ಆತ್ಮಹತ್ಯೆ
ಬೆಂಗಳೂರು, 09 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಕಟ್ಟಡದ 5ನೇ ಮಹಡಿಯಿಂದ ಬಿದ್ದು, ಪೋಕ್ಸೋ ಪ್ರಕರಣದ ಆರೋಪಿ ಗೌತಮ್ ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪರಪ್ಪನ ಅಗ್ರಹಾರ ಜೈಲಿಯಿಂದ ಮೊದಲ ವಿಚಾರಣೆಗೆ ಕರೆತಂದ ವೇಳೆ ಈ ದುರ್ಘಟನೆ ಸಂಭವಿಸಿದೆ. ಆಡುಗೋಡಿ ಪೊಲೀಸ್
Court


ಬೆಂಗಳೂರು, 09 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಕಟ್ಟಡದ 5ನೇ ಮಹಡಿಯಿಂದ ಬಿದ್ದು, ಪೋಕ್ಸೋ ಪ್ರಕರಣದ ಆರೋಪಿ ಗೌತಮ್ ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪರಪ್ಪನ ಅಗ್ರಹಾರ ಜೈಲಿಯಿಂದ ಮೊದಲ ವಿಚಾರಣೆಗೆ ಕರೆತಂದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಸೆಕ್ಷನ್ 6 ಮತ್ತು 10 ಅಡಿಯಲ್ಲಿ ಕಾನೂನು ಕ್ರಮ ಜಾರಿಯಲ್ಲಿತ್ತು. ಇಂದು ಕೋರ್ಟ್‌ನಲ್ಲಿ ಇಬ್ಬರು ಆರೋಪಿಗಳನ್ನೂ ವಿಚಾರಣೆಗೆ ನ್ಯಾಯಾಲಯಕ್ಕೆ ಕರೆ ತರುವ ಸಂದರ್ಭ, ಗೌತಮ್ ಕಟ್ಟಡದ ಮೇಲಿಂದ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನೆಯ ಸ್ಥಳಕ್ಕೆ ಹಲಸೂರ್ ಗೇಟ್ ಪೊಲೀಸ್ ಠಾಣಾ ಸಿಬ್ಬಂದಿ, ಕೇಂದ್ರ ವಿಭಾಗ ಡಿಸಿಪಿ ಅಕ್ಷಯ್ ಮಚೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande