ಬೆಂಗಳೂರು, 09 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಎಲ್ಲ ವ್ಯವಸ್ಥೆ ದಾರಿ ತಪ್ಪಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಗ್ ಬಾಸ್ ವಿಚಾರದಲ್ಲಿ ಸ್ಟುಡಿಯೊ ಮಾಲಕರು ಮತ್ತು ಅಧಿಕಾರಿಗಳ ನಡುವೆ ನಡೆಯುವುದು ಯಾವ ಕಾನೂನಿನ ಅಡಿಯಲ್ಲಿ ಯಾವ ಕ್ರಮ ಕೈಗೊಳ್ಳಬೇಕು ಎನ್ನುವುದಕ್ಕೂ ಕಾನೂನು ಪ್ರಕಾರ ನಡೆಯುವ ಪದ್ದತಿ ಇದೆ ಎಂದಿದ್ದಾರೆ.
ಈ ಮಧ್ಯೆ ಅದಕ್ಕೆ ಉಪ ಮುಖ್ಯಮಂತ್ರಿ ಅವರು ಹಿಂದೆ ಆಡಿದ ಮಾತು ಸೇರಿಸಿ ಕೆಲವರು ಹೇಳುತ್ತಿದ್ದಾರೆ. ಅದು ಮುಖ್ಯವಲ್ಲ. ಎಲ್ಲೊ ದಾರಿ ತಪ್ಪುತ್ತಿದೆ ಎನಿಸುತ್ತಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರ ವ್ಯಾಪ್ತಿ ಏನು ಬಂದ್ ಮಾಡುವ ಅಧಿಕಾರ ಇದೆಯಾ ಇಲ್ಲವಾ ನೋಡಬೇಕು. ಒಂದು ಕಡೆ ಮನರಂಜನಾ ಉದ್ಯಮ ನಡೆಯಬೇಕು ಇನ್ನೊಂದೆಡೆ ಮಾಲಿನ್ಯವಾಗದಂತೆ ನೊಡಿಕೊಳ್ಳಬೇಕಿದೆ. ಎಷ್ಟು ದಿನದಿಂದ ಈ ಸಮಸ್ಯೆ ಇದೆ. ಈಗ ಏಕೆ ಕ್ರಮ ಕೈಗೊಂಡಿದ್ದಾರೆ ಎನ್ನುವ ಪ್ರಶ್ನೆ ಮೂಡುತ್ತದೆ ಎಂದರು.
ಇಕೊ ಎಕನಾಮಿಕ್ಸ್ ಮೂಲಕ, ಆರ್ಥಿಕತೆಯೂ ನಡೆಯಬೇಕು, ಪರಿಸರವೂ ಉಳಿಯಬೇಕು. ಅದು ಈ ರಾಜ್ಯದಲ್ಲಿ ತಪ್ಪಿ ಹೋಗಿದೆ. ರಾಜ್ಯದಲ್ಲಿ ಎಲ್ಲವೂ ದಾರಿ ತಪ್ಪಿದೆ. ನಡೆದದ್ದೇ ದಾರಿ ಎನ್ನುವಂತಾಗಿದೆ. ಹಾಗೆ ಆದಾಗಲೇ ಈ ರೀತಿಯ ಘಟನೆಗಳು ನಡೆಯುತ್ತವೆ. ಡಿ.ಕೆ. ಶಿವಕುಮಾರ್ ಅವರು ಬಿಗ್ ಬಾಸ್ ಕಾರ್ಯಕ್ರಮಕ್ಕೆ ಅನುಮತಿ ನೀಡಿಸಿ ಇದರಲ್ಲಿ ತಮ್ಮ ಪಾತ್ರ ಇಲ್ಲ ಎನ್ನುವುದನ್ನು ಸಾಬೀತು ಪಡಿಸುವ ಪ್ರಯತ್ನ ಮಾಡಿದ್ದಾರೆ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa