ಸರ್ಕಾರ ಎರಡು ಪಟ್ಟು ಬೆಳೆ ಪರಿಹಾರ ನೀಡಲಿ : ಬೊಮ್ಮಾಯಿ
ಬೆಂಗಳೂರು, 09 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾದ ಪ್ರವಾಹಕ್ಕೆ ರಾಜ್ಯ ಸರ್ಕಾರ ತಕ್ಷಣವೇ ಕೇಂದ್ರ ಸರ್ಕಾರ ನೀಡುವ ಎರಡು ಪಟ್ಟು ಪರಿಹಾರ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡ
BsB


ಬೆಂಗಳೂರು, 09 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾದ ಪ್ರವಾಹಕ್ಕೆ ರಾಜ್ಯ ಸರ್ಕಾರ ತಕ್ಷಣವೇ ಕೇಂದ್ರ ಸರ್ಕಾರ ನೀಡುವ ಎರಡು ಪಟ್ಟು ಪರಿಹಾರ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾದ ಪ್ರವಾಹಕ್ಕೆ ಸರಿಯಾದ ಪರಿಹಾರ ನೀಡದಿರುವ ಕುರಿತು ಮಾತನಾಡಿದ ಅವರು ಯಡಿಯೂರಪ್ಪ ಅವರ ಕಾಲದಲ್ಲಿ ಪ್ರವಾಹ ಆದಾಗ 63 ಹೊಸ ಗ್ರಾಮಗಳನ್ನೆ ಕಟ್ಟಿಸಿದರು. ಎರಡನೇ ಸಾರಿ ಪ್ರವಾಹ ಆದಾಗ ಸುಮಾರು ಮೂರು ಲಕ್ಷ ಮನೆಗಳನ್ನು ಐದು ಲಕ್ಷ ಪರಿಹಾರ ನೀಡಿದ್ದೇವೆ. ನಾನು ಸಿಎಂ ಆಗಿದ್ದಾಗ ಕೇಂದ್ರ ಸರ್ಕಾರ ನೀಡುವ ಎರಡು ಪಟ್ಟು ಪರಿಹಾರ ನೀಡಿದ್ದೇವು. ಒಣ ಬೇಸಾಯಕ್ಕೆ 13 ಸಾವಿರ, ನೀರಾವರಿಗೆ 18 ಸಾವಿರ, ತೋಟಗಾರಿಗೆ ಬೆಳೆಗಳಿಗೆ 25 ಸಾವಿರ ರೂ. ಪ್ರತಿ ಎಕರೆಗೆ ಪರಿಹಾರ ನೀಡಿದ್ದೇವು. ಸುಮಾರು ಏಳು ಲಕ್ಷ ರೈತರಿಗೆ ಪರಿಹಾರ ನೀಡಿದ್ದೇವೆ. ರಾಜ್ಯ ಸರ್ಕಾರ ಕೂಡಲೇ ರೈತರಿಗೆ ಎರಡು ಪಟ್ಟು ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande